April 4, 2025

Bhavana Tv

Its Your Channel

ವಿಶ್ವ ಮಹಿಳಾ ದಿನಾಚರಣೆ ಹಾಗೂ ಸುರಕ್ಷತಾ ಜಾಗೃತಿ ಅಭಿಯಾನ ಸಪ್ತಾಹ ಕಾರ್ಯಕ್ರಮ

ಉಡುಪಿ: ಸುಯೆಜ್ ಕಂಪನಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಸುರಕ್ಷತಾ ಜಾಗೃತಿ ಅಭಿಯಾನ ಸಪ್ತಾಹ ಕಾರ್ಯಾಕ್ರಮ ಆಯೋಜಿಸಿದ್ದು, ಸರ್ಕಲ್ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ್ ಸರ್ ಅವರು ವಾಹನ ಚಾಲನೆ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತಾಗಿ ಮಾಹಿತಿ ನೀಡಿದರು. ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಮಹಿಳಾ ದಿನಾಚಾರಣೆಯ ಕುರಿತಾಗಿ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಸುಯೆಜ್ ಕಂಪನಿ ಉಡುಪಿ ಶಾಖೆ ವತಿಯಿಂದ ಸೇವೆಯನ್ನು ಗುರುತಿಸಿ ಗೌರವಿಸಿ,ಸಂಸ್ಥೆಗೆ ದೇಣಿಗೆ ನೀಡಿ ಸಹಕರಿಸಿದರು.
ಈ ಸಂದರ್ಭದಲ್ಲಿ ಪ್ರೊಜೆಕ್ಟ್ ಮ್ಯಾನೇಜರ್ ಶ್ರೀ ಶ್ರೀನಿವಾಸ್ ರಾವ್, ಕು.ಸುಪ್ರೀಯಾ ಶೆಟ್ಟಿ, ಅಕ್ಷತಾ ಹಾಗೂ ಶ್ರೀ ಪ್ರದೀಪ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

error: