April 22, 2021

Bhavana Tv

Its Your Channel

ಮಾಸ್ಕ್ ಧರಿಸದಿದ್ದಲ್ಲಿ ದಂಡ- ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ

ಕಾರ್ಕಳ: ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕೋರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸಾರ್ವಜನಿಕರು ಆದಷ್ಟು ಮಾಸ್ಕನ್ನು ಧರಿಸಿ ಸಾಮಾಜಿಕ ಅಂತರ ಕಾಪಾಡಿ ಕೊಳ್ಳಬೇಕಾಗಿದೆ. ಮಾಸ್ಕ್ ಧರಿಸದಿದ್ದಲ್ಲಿ ಪುರಸಭೆಯ ವತಿಯಿಂದ ೧೦೦ ರೂಪಾಯಿ ದಂಡ ವಿಧಿಸಲಾಗುವುದು . ಸಾರ್ವಜನಿಕ ಸಭೆ ಸಮಾರಂಭ ಗಳು ನಡೆಯುತ್ತಿದ್ದು ಇನ್ನೂರಕ್ಕೂ ಹೆಚ್ಚು ಮಂದಿ ಜನರು ಭಾಗವಹಿಸಿದ್ದು ಗಮನಕ್ಕೆ ಬಂದಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕನ್ನ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ ಎಂದು ಕಾರ್ಕಳ ಪುರಸಭಾ ಮುಖ್ಯಧಿಕಾರಿ ರೇಖಾ ಜೆ.ಶೆಟ್ಟಿ ಮಾದ್ಯಮದ ಮೂಲಕ ತಿಳಿಸಿದರು.

error: