May 15, 2024

Bhavana Tv

Its Your Channel

ಮುದ್ರಾಡಿ : ಕಾಂಗ್ರೆಸ್ ಪ್ರಮುಖರು ಬಿಜೆಪಿ ಸೇರ್ಪಡೆ

ಕಾರ್ಕಳ: -ಕಾರ್ಕಳ ಕಳೆದ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಿAದ ವಿವಿಧ ಪಕ್ಷಗಳಿಂದ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುವವರ ಸರದಿ ಮುಂದುವರಿದಿದ್ದು ಮುದ್ರಾಡಿ ಗ್ರಾಮ ಪಂಚಾಯತಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ ಪ್ರಶಾಂತ ಪೂಜಾರಿ ಮತ್ತು ಹೇಮಾವತಿ ಪೂಜಾರಿ ಹಾಗೂ ಹಿರಿಯ ಕಾಂಗ್ರೆಸ್ ದುರೀಣ ರಾಜು ಪೂಜಾರಿಯವರ ಸಹಿತ ಅನೇಕ ಬೆಂಬಲಿಗರು ಈ ದಿನ ಶಾಸಕರ ಕಛೇರಿ ವಿಕಾಸದಲ್ಲಿ ಶಾಸಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಹೇಮಾವತಿ ಪೂಜಾರಿಯವರು ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘದ ೨ನೇ ಅವಧಿಯ ನಿರ್ದೇಶಕರಾಗಿ ಕೂಡ ಸೇವೆ ಸಲ್ಲಿಸುತ್ತಿದ್ದಾರೆ. ಮುದ್ರಾಡಿಯಲ್ಲಿ ಕಾಂಗ್ರೆಸ್‌ರವರ ದಬ್ಬಾಳಿಕೆಯನ್ನು ವಿರೋದಿಸಿ ಮತ್ತು ಬಿಜೆಪಿ ಪಂಚಾಯತು ಮತ್ತು ಶಾಸಕರ ಕ್ಷೇತ್ರ ಅಭಿವೃದ್ಧಿಯನ್ನು ಮೆಚ್ಚಿಕೊಂಡು ತಾವೆಲ್ಲರೂ ಬಿಜೆಪಿ ಸೇರುತ್ತುರುವುದಾಗಿ ಅವರುಗಳು ಹೇಳಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕ್ಷೇತ್ರಾಧ್ಯಕ್ಷರಾದ ಮಹಾವೀರ ಹೆಗ್ಡೆ ಹಾಗೂ ಶಾಸಕರಾದ ವಿ. ಸುನಿಲ್ ಕುಮಾರ್ ರವರು ಪಕ್ಷದ ಧ್ವಜ ನೀಡಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಹೆಬ್ರಿ ಜಿಲ್ಲಾ ಪಂಚಾಯತ್ ಸದಸ್ಯೆ ಜ್ಯೋತಿ ಹರೀಶ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್, ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಹೆಗ್ಡೆ, ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ, ಹೆಬ್ರಿ ತಾಲೂಕು ಪಂಚಾಯತ್ ಅಧ್ಯಕ್ಷ ರಮೇಶ್ ಕುಮಾರ್ ಶಿವಪುರ ಮೊದಲಾದ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಬಿಜೆಪಿ ಉಡುಪಿ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್ ನಿರೂಪಿಸಿ ವಂದಿಸಿದರು.

error: