June 15, 2024

Bhavana Tv

Its Your Channel

ಕೊಲ್ಲೂರು ದೇವಳಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್

ಬೈಂದೂರು : ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬುಧವಾರ ಬೆಳಿಗ್ಗೆ ಶ್ರೀ ಮೂಕಾಂಬಿಕಾ ದೇವಳದಲ್ಲಿ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಕುಟುಂಬ ಸಮೇತರಾಗಿ ಗೃಹ ಸಚಿವರು ಭಾಗಿಯಾಗಿದರು. ಪ್ರಧಾನ ಅರ್ಚಕ ಕೆ. ಎನ್ ಸುಬ್ರಹ್ಮಣ್ಯ ಅಡಿಗರ ನೇತೃತ್ವದಲ್ಲಿ ಚಂಡಿಕಾ ಹೋಮ ನಡೆಯಿತು. ದೇವಸ್ಥಾನದ ವತಿಯಿಂದ ಗೃಹಸಚಿವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ರಾಮಚಂದ್ರ ಅಡಿಗ, ಕಾರ್ಯನಿರ್ವಹಣಾಧಿಕಾರಿ ರವಿ ಕೋಟಾರಗಸ್ತಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ಅತುಲ್ ಕುಮಾರ್ ಶೆಟ್ಟಿ, ರತ್ನಾ ರಮೇಶ್ ಕುಂದರ್ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ವಂಡಬಳ್ಳಿ ಜಯರಾಮ ಶೆಟ್ಟಿ, ರಮೇಶ್ ಗಾಣಿಗ ಕೊಲ್ಲೂರು, ಮೊದಲಾದವರಿದ್ದರು.

error: