February 14, 2025

Bhavana Tv

Its Your Channel

ಯು. ರಾಘವೇಂದ್ರ ಹೊಳ್ಳ ಅವರಿಗೆ ಬೀಳ್ಕೋಡಿಗೆ ಸಮಾರಂಭ

ಬೈ0ದೂರು : ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಫಾರ್ಮಸಿ ಅಧಿಕಾರಿಯಾಗಿ ಬಡ್ತಿ ಹೊಂದಿದ ಯು. ರಾಘವೇಂದ್ರ ಹೊಳ್ಳ ಅವರು ಭಟ್ಕಳ ತಾಲೂಕು ಆಸ್ಪತ್ರೆಗೆ ವರ್ಗಾವಣೆಹೊಂದಿರುವ ಇವರನ್ನು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಿAದ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಗಣೇಶ್ ಭಟ್ ಮಾತನಾಡಿ, ರಾಘವೇಂದ್ರ ಹೊಳ್ಳ ಅವರು ಕೆಲಸ ಮಾಡಿದ ಕಡೆಗಳಲ್ಲಿ ಉತ್ತಮ ಹೆಸರನ್ನು ಸಂಪಾದಿಸಿದ್ದು, ಸದಾ ರೋಗಿಗಳ ಸಹಾಯಕ್ಕೆ ಮಿಡಿಯುತ್ತಿದ್ದರು. ವೈದ್ಯರು, ಶುಶ್ರೂಷಕರು, ಸಿಬ್ಬಂದಿಗಳು ಸೇರಿದಂತೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿ ಸಾರ್ಥಕ ಸೇವೆಯನ್ನು ಆರೋಗ್ಯ ಇಲಾಖೆಗೆ ನೀಡಿದ್ದಾರೆ ಎಂದು ಪ್ರಶಂಸಿಸಿದರು.

ಮರವAತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಆಶಿತ್, ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಭಾಗ್ಯಲಕ್ಷ್ಮೀ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಿಜಯ ದೇಸಾಯಿ, ಮರವಂತೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಅನಿತಾ ಆರ್.ಕೆ, ಆರೋಗ್ಯ ನಿರೀಕ್ಷಣಾಧಿಕಾರಿ ಹುಲಿಪ್ಪ ಗೌಡ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗ ಇದ್ದರು.
ವರದಿ : ಎಚ್ ಸುಶಾಂತ್ ಬೈಂದೂರು

error: