May 21, 2024

Bhavana Tv

Its Your Channel

ಆಹಾರ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವುದಕ್ಕೆ ಪುಷ್ಟಿ ಸಿಕ್ಕಿದೆ; ಕಳೆದ ವರ್ಷ ಕಿಟ್ ಪಡೆದವರು ತಲುಪಿದೆ ಎಂದು ಸತ್ಯ ನುಡಿದರೆ ೨೫ ಸಾವಿರ ರೂಪಾಯಿ ಬಹುಮಾನ?!!!

ಕಾರ್ಕಳ: ಕಳೆದ ವರ್ಷ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ನೆರವಾಗಲೆಂದು ಕರ್ನಾಟಕ ಕಟ್ಟಡ ಕಾರ್ಮಿಕ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಕಳ ತಾಲೂಕಿಗೆ ಬಿಡುಗಡೆಯಾಗಿದ್ದ ೪೫ ಲಕ್ಷ ರೂಪಾಯಿಯ ೫೦೦೦ ಕಿಟ್‌ಗಳಲ್ಲಿ ಒಂದನ್ನೂ ವಿತರಿಸದೆ ಶಾಸಕರಾದ ಸುನೀಲ್ ಕುಮಾರ್ ಮತ್ತು ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿ ಹೋರಾಟ ಮಾಡಿದ್ದರ ಫಲವಾಗಿ ಈ ಬಾರಿ ಬಿಡುಗಡೆಯಾಗಿದ್ದ ಆಹಾರ ಕಿಟ್‌ನ್ನು ಸರಕಾರದ ಆದೇಶದಂತೆ ಪ್ರತೀ ಗ್ರಾಮ ಪಂಚಾಯತ್ ಮತ್ತು ಪುರಸಭೆಯ ಮೂಲಕ ಫಲಾನುಭವಿಗಳ ಪಟ್ಟಿ ತಯಾರಿಸಿ ಅವರ ನೇತೃತ್ವದಲ್ಲಿಯೇ ವಿತರಿಸಲಾಗಿದೆ ಎಂದು ಪುರಸಭಾ ಸದಸ್ಯ ಶುಭದ ರಾವ್
ಹೇಳಿದರು. ಇದರಿಂದಾಗಿ ಯಾರಿಗೆ ಕಿಟ್ ಸಲ್ಲಬೇಕಿತ್ತೊ ಅವರಿಗೆ ಸಲ್ಲಿಸಿದ್ದೇವೆ ಎಂಬ ತೃಪ್ತಿ ನಮಗಿದೆ. ಆದರೆ ಕಳೆದ ವರ್ಷ ಇದೇ ರೀತಿಯಲ್ಲಿ ಕಿಟ್ ವಿತರಿಸಬೇಕು ಎಂಬ ತಮ್ಮದೇ ಸರಕಾರದ ಆದೇಶವಿದ್ದರೂ ಯಾಕೆ ವಿತರಿಸಲಿಲ್ಲ? ಮತ್ತು ಯಾವುದೇ ಕಿಟ್ ವಿತರಿಸದಯೇ ಸರಕಾರಕ್ಕೆ ಬೋಗಸ್ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸಿರುವುದು ತಾವು ಭ್ರಷ್ಟಾಚಾರ ನಡೆಸಿದ್ದೀರಿ ಎನ್ನುವ ಆರೋಪಕ್ಕೆ ಪುರಾವೆಯಲ್ಲವೇ ಎನ್ನುವ ಪ್ರಶ್ನೆಗೆ ಉತ್ತರಿಸಬೇಕು ಎಂದು ಒತ್ತಾಯಿಸುತ್ತೇನೆ.
ಕಳೆದ ವರ್ಷ ಶಾಸಕರು ವಿತರಿಸಿದ್ದಾರೆ ಎನ್ನಲಾದ ೫೦೦೦ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿರುವ ಒಬ್ಬನೇ ಒಬ್ಬ ವ್ಯಕ್ತಿ ಈ ರೀತಿಯ ರಟ್ಟಿನ ಬಾಕ್ಸಿನಲ್ಲಿರುವ ೧೩ ಆಹಾರ ಪದಾರ್ಥಗಳ ಕಿಟ್ ನಾನು ಪಡೆದಿದ್ದೇನೆ ಎಂದು ಸತ್ಯ ನುಡಿದರೆ ಅವರಿಗೆ ೨೫ ಸಾವಿರ ರೂಪಾಯಿಗಳ ಬಹುಮಾನವನ್ನು ನೀಡಲಾಗುವುದು, ಅಥವಾ ಅಂದಿನ ಪಂಚಾಯತ್ ಅದ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಧಿಕಾರಿಗಳು ಯಾರೇ ಅದರೂ ಕಳೆದ ವರ್ಷ ಇದೇ ರೀತಿಯ ಕಿಟ್‌ನ್ನು ವಿತರಿಸಿದ್ದೇವೆ ಎಂದು ಸತ್ಯ ನುಡಿದರೆ ಅವರಿಗೂ ೨೫ ಸಾವಿರ ರೂಪಾಯಿ ಬಹುಮಾನವನ್ನು ನೀಡಲಾಗುವುದು ಇಲ್ಲವಾದರೆ ಶಾಸಕರು ಮತ್ತು ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದ್ದು ಸತ್ಯ ಎಂದು ಸಾಭಿತಾದಂತೆ.
ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲೆಂದು ಕೆಲ ದಾನಿಗಳು ನೀಡಿದ ಹಣದಲ್ಲಿ ಚಿನ್ನದ ಕೆಲಸಗಾರರು, ಕ್ಷೌರಿಕರು, ಲಾಂಡ್ರಿ ಕಾರ್ಮಿಕರು,ಆಟೋರಿಕ್ಷಾ ಚಾಲಕರು, ಬಸ್ಸ್ ಸಿಬ್ಬಂದಿಗಳು, ಕಾರು ಚಾಲಕರು ಮೊದಲಾದ ಕಾರ್ಮಿಕರಿಗೆ ಕೇವಲ ೩೦೦/ ರೂ ಕಿಟ್‌ನ್ನು ವಿತರಿಸಿ ಅದನ್ನೇ ಕಾರ್ಮಿಕ ಇಲಾಖೆಯ ೮೯೯/ ರೂ ಕಿಟ್ ಎಂದು ನಂಬಿಸಿ ಸರಕಾರಕ್ಕೆ ಬೋಗಸ್ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸಿ ಸರಕಾರಕ್ಕೆ ಮತ್ತು ಕ್ಷೇತ್ರದ ಜನತೆಗೆ ದ್ರೋಹ ಬಗೆಯಲಾಗಿದೆ, ಹಸಿದ ಹೊಟ್ಟೆಗೆ ತಿನ್ನಲು ನೀಡಿದ ಆಹಾರ ಹಣವನ್ನು ಲೂಟಿ ಮಾಡಿ ಬಡವರನ್ನು ವಂಚಿಸಲಾಗಿದೆ, ಇಂತವರನ್ನು ದೇವರೂ ಕ್ಷಮಿಸಲಾರ, ಲೋಕಾಯುಕ್ತ ತನಿಖೆಯ ಮೇಲೆ ಭರವಸೆ ಇದೆ, ಲೋಕಕ್ಕೆ ಸತ್ಯ ತಿಳಿಯುವುದು ಎಂಬ ನಂಬಿಕೆ ಇದೆ ಎಂದು ಶುಭದ ರಾವ್ ಹಾಗೂ ಹಾಗೂ ಕಾಂಗ್ರೇಸ್ ಮುಖಂಡರು. ಮಾಳ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಜಿತ್ ಹೆಗ್ಡೆ , ಯುವ ಕಾಂಗ್ರೇಸ್ ಕಾರ್ಕಳ ಅಧ್ಯಕ್ಷರಾದ ಯೋಗಿಶ್ ನಯನ್ ಇನ್ನಾ , ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು.

ವರದಿ:ಅರುಣ ಭಟ್ಟ ಕಾರ್ಕಳ

error: