May 3, 2024

Bhavana Tv

Its Your Channel

ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಕಾರ್ಕಳ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ

ವರದಿ: ಅರುಣ ಭಟ್ ಕಾರ್ಕಳ

ಕಾರ್ಕಳ:ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಕಾರ್ಕಳ ಇದರ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಉಡುಪಿ , ಡಾಕ್ಟರ ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ .ರಿ. ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸನಾ ಶಿಬಿರ ರವಿವಾರ ದಂದು ಲಯನ್ಸ್ ಕ್ಲಬ್ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜೇಶ್ ಶೆಣೈ ಯವರು ವಹಿಸಿಕೊಂಡಿದ್ದರು. ಉದ್ಘಾಟನೆಯನ್ನು ಡಾಕ್ಟರ ಕೃಷ್ಣಪ್ರಸಾದ್ ಪ್ರಸಾದ್ ನೆತ್ರಾಲಯ ಇವರು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ವೀರಭದ್ರಪ್ಪ, ಮಿಥುನ್ ಹೆಗ್ಡೆ , ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್,ಸುಭಾಷ್ ಸುವರ್ಣ , ನೋವೆಲ್ ಡಿ. ಸಿಲ್ವಾ ನಿತ್ಯಾನಂದ ಭಂಡಾರಿ ಪ್ರಕಾಶ್ ಪಿಂಟೋ ಮುಂತಾದವರು ಉಪಸ್ಥಿತರಿದ್ದರು.

error: