April 20, 2024

Bhavana Tv

Its Your Channel

ಹೈಕೋಟ್ ಆದೇಶ ಅನುಷ್ಠಾನಕ್ಕೆ ಒತ್ತಾಯ

ಕಾರ್ಕಳ: ವಿಸ್ತೃತ ಬಸ್ ನಿಲ್ದಾಣ ಹಾಗೂ ಬಂಡೀಮಠ ಬಸ್ ನಿಲ್ದಾಣಗಳೆರಡನ್ನು ಸಮಾನವಾಗಿ ಸದ್ಭಾವಕೆ ಮಾಡುವಂತೆ ರಾಜ್ಯ ಹೈಕೋರ್ಟ್ ಆದೇಶ ನೀಡಿ ವರ್ಷಗಳೆ ಕಳೆದು ಹೋಗಿದೆ. ಹೈಕೋರ್ಟ್ ಆದೇಶಕ್ಕೆ ಜಿಲ್ಲಾಡಳಿತ, ಕಾರ್ಕಳ ಪುರಸಭೆ ಗೌರವಿಸಿಲ್ಲ. ಈ ಕುರಿತು ಅರ್ಜಿದಾರರು ಮತ್ತೇ ನ್ಯಾಯಾಲಯಕ್ಕೆ ಮೋರೆ ಹೋದರೆ ಪುರಸಭಾ ಸದಸ್ಯರು ಸಹಿತ ಅಧಿಕಾರಿಗಳು ಕಾನೂನಿನ ಕುಣಿಕೆಯಲ್ಲಿ ಸಿಲುಕಬೇಕಾದಿತ್ತೆಂದು ಕಾರ್ಕಳ ಪುರಸಭಾ ಪ್ರತಿಪಕ್ಷ ನಾಯಕ ಅಶ್ಪಕ್ ಅಹಮ್ಮದ್ ಹೇಳಿದರು.
ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮ ಅವರು ಅಧ್ಯಕ್ಷತೆಯಲ್ಲಿ ಜರುಗಿದ್ದ ಸಾಮಾನ್ಯ ಸಭೆಯ ಕಲಾಪವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಭರತ್‌ಲಾಲ್ ಮೀನಾ ಅವರು ಕಾರ್ಕಳ ಬಸ್ ನಿಲ್ದಾಣಕ್ಕೆಂದು ಬಂಡಿಮಠದಲ್ಲಿ ಜಾಗವನ್ನು ಕಾದಿರಿಸಿದ್ದರು. ಕಾರ್ಕಳ ಪುರಸಭೆಯು ಕಾಂಗ್ರೆಸ್‌ನ ಅವಧಿಯಲ್ಲಿ ಇದ್ದಾಗ ಅಂದಿನ ಉಸ್ತುವಾರಿ ಸಚಿವ ಡಾ.ವಿ.ಎಸ್.ಆಚಾರ್ಯ ಅವರ ಮುತುವರ್ಜಿಯಿಂದ ರೂ.೨.೭೫ ಕೋಟಿ ಅನುದಾನದೊಂದಿಗೆ ಬಂಡೀಮಠ ಬಸ್ ನಿಲ್ದಾಣವನ್ನು ಕಾಂಕ್ರೀಟ್‌ಕರಣಗೊಳಿಸಿ ಅಭಿವೃದ್ಧಿ ಪಡಿಸಿ ಅಂದಿನ ಮುಖ್ಯ ಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಲೋಕಾರ್ಪಣೆಗೈದಿದ್ದರು. ನಂತರದ ದಿನಗಳಲ್ಲಿ ಆ ಬಸ್ ನಿಲ್ದಾಣಕ್ಕೆ ಡಾ.ವಿ.ಎಸ್.ಆಚಾರ್ಯ ನಾಮಕರಣಗೈಯುವ ಮೂಲಕ ಅಂದಿನ ಪುರಸಭಾ ಆಡಳಿತವು ಅಭಿವೃದ್ಧಿಗೆ ಒತ್ತು ನೀಡಿತ್ತು.
ಸ್ಥಾಪಿತ ಹಿತಾಸಕ್ತಿಯಿಂದಾಗಿ ಕೊಟ್ಯಾಂತರ ರೂಪಾಯಿ ವೆಚ್ಚ ಮಾಡಿದ ಬಂಡೀಮಠ ಬಸ್ ನಿಲ್ದಾಣ ಪಾಳು ಬೀಳುವ ಸ್ಥಿತಿಗೆ ತಲುಪಿತು. ಈ ಕುರಿತು ನಾಗರಿಕರು ಹೈಕೋರ್ಟ್ ಮೊರೆ ಹೋಗಿದ್ದರು ಎಂದು ಅಶ್ಪಕ್ ಅಹಮ್ಮದ್ ಸಭೆಯಲ್ಲಿ ಪ್ರಸ್ತಾಪಿದರು.
ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರ ವಿಚಾರ ಗಮನಕ್ಕೆ ತಂದು ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸುವ ಎಂದು ಮುಖ್ಯಾಧಿಖಾರಿ ರೂಪಾ ಶೆಟ್ಟಿ ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಪಲ್ಲವಿ ರಾವ್, ಸ್ಥಾಯೀ ಸಮಿತಿ ಅಧ್ಯಕ್ಷ ಲಕ್ಷಿö್ಮÃ ನಾರಾಯಣ ಮಲ್ಯ, ಮುಖ್ಯಾಧಿಕಾರಿ ರೂಪಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

error: