April 24, 2024

Bhavana Tv

Its Your Channel

ಕಾರ್ಕಳ ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ.

ಕಾರ್ಕಳ : ಕಾರ್ಕಳ ಪುರಸಭೆಯಲ್ಲಿ ಪೌರ ಕಾರ್ಮಿಕರಿಗೆ ದಿನಾಚರಣೆಯ ಪ್ರಯುಕ್ತ ವಿಶೇಷ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ, ಹಾಗೂ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ . ಉಪಸ್ಥಿತರಿದ್ದರು. ಪೌರಕಾರ್ಮಿಕರಿಗೆ ಫಲಪುಷ್ಪ ನೀಡಿ ಗೌರವಿಸಲಾಯಿತು.
ನಂತರ ಮಾತನಾಡಿದ ಪುರಸಭಾ ಅಧ್ಯಕ್ಷೆ ಸುಮಾ ಕೇಶವ ಮಾತನಾಡಿ ಇವತ್ತು ಪೌರಕಾರ್ಮಿಕರ ದಿನ ತುಂಬಾ ಸಂತೋಷವಾಗಿದೆ. ಅವರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ನಂತರ ಮಾತನಾಡಿದ ಮುಖ್ಯಾಧಿಕಾರಿ ರೂಪಾ ಟಿ ಶೆಟ್ಟಿ ಪೌರ ಕಾರ್ಮಿಕರ ದಿನ ನಿಮ್ಮ ದಿನ ನಿಮ್ಮನ್ನು ಗುರುತಿಸಿ ಗೌರವಿಸುವ ದಿನ .ಪೌರಕಾರ್ಮಿಕರ ದಿನದಂದು ಸರಕಾರದ ಸುತ್ತೋಲೆಯಂತೆ ಪೌರಕಾರ್ಮಿಕರಿಗೆ ರಜೆಯನ್ನು ಘೋಷಿಸಲಾಗಿದೆಯೆಂದರು.

ವರದಿ: ಅರುಣ ಭಟ್ ಕಾರ್ಕಳ

error: