April 27, 2024

Bhavana Tv

Its Your Channel

೨೦೨೧-೨೨ನೇ ಸಾಲಿನ ಪ್ರತಿಭಾ ಪುರಸ್ಕಾರ

ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ದಿನಾಂಕ ಇಂದು ೨೦೨೧-೨೨ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಜಯರಾಜ ಶೆಟ್ಟಿ ಇವರು ವಹಿಸಿಕೊಂಡಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಹರ್ಷಿಣಿ ಕೆ. ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ೨೦೨೦-೨೧ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಮತ್ತು ಆಯಾ ವಿಷಯವಾರು ಶೇ.೧೦೦ ಅಂಕವನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿ ಸ್ಥಾನದಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಗಣಿತನಗರ ಇದರ ಅಧ್ಯಕ್ಷರಾದ ಡಾ|| ಸುಧಾಕರ ಶೆಟ್ಟಿ ಇವರು ಶಾಲೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಇದೊಂದು ಸರ್ಕಾರಿ ಶಾಲೆಗಳಲ್ಲಿ ಮಾದರಿ ಶಾಲೆಯಾಗಿದ್ದು ಶಿಸ್ತು ಹಾಗೂ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ ಎಂದು ತಿಳಿಸಿ ವಿದ್ಯಾರ್ಥಿಗಳನ್ನು ಪಾಠ-ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಾನವೀಯತೆಯನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತನ್ನು ತಿಳಿಸಿದರು.
ಇನ್ನೋರ್ವ ಅತಿಥಿಯಾದ ಜೈನ್ ಹೈಸ್ಕೂಲ್ ಮೂಡಬಿದ್ರಿ ಇಲ್ಲಿಯ ನಿವೃತ್ತ ಮುಖ್ಯಶಿಕ್ಷಕರಾದ ಮುನಿರಾಜ ರೆಂಜಾಳ ಇವರು ತರಗತಿ ಮಾಸಪತ್ರಿಕೆಯನ್ನು ಬಿಡುಗಡೆ ಮಾಡಿ ವಿದ್ಯಾರ್ಥಿಗಳು ಸಾಮಾಜಿಕ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣದ ಜೊತೆಗೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗುವಂತೆ ತಿಳಿಸಿದರು.
೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೬೨೫ ಅಂಕಗಳಿಗೆ ೬೨೧ ಅಂಕಗಳನ್ನು ಪಡೆದು ರಾಜ್ಯದಲ್ಲಿ ತೃತೀಯ ಸ್ಥಾನವನ್ನು ಪಡೆದ ಮಯೂರಿ ಜೆ ಶೆಟ್ಟಿ ಇವರಿಗೆ ದಾನಿಗಳಾದ ರೋ. ವೈ. ಮೋಹನ್ ಶೆಣೈ ಇವರು ಚಿನ್ನದ ಪದಕವನ್ನು ನೀಡಿ ಅಭಿನಂದಿಸಿದರು. ದಾನಿಗಳಾದ ನೀಲ್ ಕುಮಾರ್ ಶೆಟ್ಟಿ ನ್ಯಾಯವಾದಿಗಳು ಹಾಗೂ ನೋಟರಿ ಇವರು ಅತ್ಯುನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರವನ್ನು ನೀಡಿ ಅಭಿನಂದಿಸಿದರು.
ಎಸ್.ಡಿ.ಎA.ಸಿ ಸದಸ್ಯರು ಹಾಗೂ ದಾನಿಗಳು ಆದಂತಹ ರಘುರಾಮ ಕಾಮತ್ ಇವರು ಶಾಲೆ ಮತ್ತು ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಹಿತವಚನವನ್ನು ನೀಡಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ಜಗದೀಶ ಹೆಗ್ಡೆ ಮತ್ತು ಪ್ರಕಾಶ್ ರಾವ್, ಯುನಿವರ್ಸಲ್ ನಾಲೆಡ್ಜ್ ಟ್ರಸ್ಟ್ನ ಸದಸ್ಯರಾದ ರೋಹನ್ ಶೆರಿ, ಪುರಸಭಾ ಸದಸ್ಯರಾದ ಪ್ರದೀಪ್ ರಾಣೆ, ಯರ್ಲಪಾಡಿ ಸಂಯುಕ್ತ ಪ್ರೌಢಶಾಲೆ ಇಲ್ಲಿನ ಮುಖ್ಯೋಪಾಧ್ಯಾಯರಾದ ಸುನಂದಾ ಎಲ್.ಎಸ್. ಉಪಸ್ಥಿತರಿದ್ದರು.
ಸಂಸ್ಥೆಯ ಸಹಶಿಕ್ಷಕಿ ವೀಣಾ ಎ. ಇವರು ಸಭಾ ಕಾರ್ಯಕ್ರಮವನ್ನು ನಿರ್ವಹಿಸಿ, ಶೈಲಜಾ ಹೆಗ್ಡೆ ವಂದನಾರ್ಪಣೆ ಗೈದರು.

error: