May 3, 2024

Bhavana Tv

Its Your Channel

ಮಣಿಪಾಲ ಆರೋಗ್ಯಕಾರ್ಡ್ 2022ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ಕಾರ್ಕಳ: ಮಣಿಪಾಲ್ ಆರೋಗ್ಯ ಕಾರ್ಡ್ 2022ರ ನೋಂದಣಿ ಪ್ರಾರಂಭವಾಗಿದೆ ಅದರ ಸದುಪಯೋಗ ಪಡಿಸಿಕೊಳ್ಳಿ ಎಂದು ಕಸ್ತೂರ ಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು . ಅವರು ಕಾರ್ಕಳ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಕರ್ತರಿಗೆ ಮಣಿಪಾಲ್ ಆರೋಗ್ಯಕಾರ್ಡ್ ವಿತರಿಸಿ ಮಾತನಾಡಿದರು . ಪತ್ರಕರ್ತರು ಸುದ್ದಿಗಳನ್ನು ಸಂಗ್ರಹಿಸಿ ಸಮಾಜಕ್ಕೆ ನೀಡುತ್ತಾ ಬಂದಿದ್ದಾರೆ .ಅವರ ಆರೋಗ್ಯವು ಕಾಪಾಡಬೇಕು . ಮಣಿಪಾಲ ಆರೋಗ್ಯ ಕಾರ್ಡ್ ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ. ಅವಿಭಾಜಿತ ದಕ್ಸಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ ಮತ್ತು ಮಧ್ಯ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆ ಅಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ ಎಂದರು.

ಟಿಎAಎಪೈ ರೋಟರಿ ಆಸ್ಪತ್ರೆ ಕಾರ್ಕಳದ ಸಹ ವ್ಯವಸ್ಥಾಪಕರಾದ ನಟೇಶ್ ಕುಮಾರ್ ಮಾತನಾಡಿ ಕಾರ್ಕಳ ತಾಲೂಕಿನ ಟಿಎಂಎ ಪೈ ರೋಟರಿ ಆಸ್ಪತ್ರೆ ರೋಗಿಗಳಿಗೆ ಉತ್ತಮ ಸೇವೆ ನೀಡುತ್ತಾ ಬಂದಿದ್ದು ಮುಂದಿನ ಕೆಲವೇ ತಿಂಗಳುಗಳಲ್ಲಿ ಹೆಚ್ಚಿನ ಸೇವೆ ನೀಡಲು ಬದ್ದವಾಗಿದೆ .ಮುಂದಿನ ಎರಡು ತಿಂಗಳುಗಳಲ್ಲಿ ಹೊಸ ಕಟ್ಡಡವು ಉದ್ಘಾಟನೆ ಗೊಳ್ಳಲಿದ್ದು ಕಾರ್ಕಳ ದಲ್ಲಿ ಒಂದೇ ಸೂರಿನಡಿ ಎಲ್ಲಾ ಅರೋಗ್ಯ ಸೇವೆಗಳು ಸಿಗಲಿವೆ ಎಂದು ಹೇಳಿದರು.

ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಷರೀಫ್ ಅಧ್ಯಕ್ಷತೆ ವಹಿಸಿದ್ದರು

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ, , ಮಾರುಕಟ್ಟೆ ವಿಭಾಗದ ಪ್ರತಿನಿಧಿ ಚೇತನ್ ಶೈವಲ್ ಪಿ ಶೆಟ್ಟಿ , ನಾರಾಯಣ ನಾಯಕ್ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಆರ್ ಬಿ ಜಗದೀಶ್ , ಕಾರ್ಕಳ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೃಷ್ಣ ಎನ್ , ಕೋಶಾಧಿಕಾರಿ ಬಾಲಕೃಷ್ಣ ಭೀಮಗುಳಿ ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: