
ಕಾರ್ಕಳ : ಇ -ಶ್ರಮ ನೊಂದಾವಣಿ ಮತ್ತು ಸ್ಥಳದಲ್ಲಿ ವಿತರಣಾ ಶಿಬಿರ ಕಾರ್ಯಕ್ರಮವು ಕಾರ್ಕಳದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಶಿಬಿರವನ್ನು ಉದ್ಘಾಟಿಸಿದ ಕ್ಷತ್ರಿಯ ಮರಾಠ ಸಮಾಜದ ಅಧ್ಯಕ್ಷ ಶುಭದ ರಾವ್ ಮಾತಾಡಿ ಸರಕಾರದ ಸವಲತ್ತುಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವುದು ಸಮಾಜದ ಮುಖಂಡರ ಕರ್ತವ್ಯವಾಗುತ್ತದೆ. ಈ ನಿಟ್ಟಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸಮಾಜದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದೆ ಸಾರ್ವಜನಿಕರು ಕೂಡ ಇದರ ಸದುಪಯೋಗ ಪಡೆದುಕೊಳ್ಳಲು ಬೇಕಾಗಿ ವಿನಂತಿಸಿಕೊAಡರು. ಯೂತ್ ಫೋರ್ ಸೇವಾ ರಮಿತಾ ಶೈಲೇಂದ್ರ ಅವರು ಆಯುಷ್ಮಾನ್ ಕಾರ್ಡ್ ಮತ್ತು ಇ -ಶ್ರಮ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರಾಗಿರುವ ಗಣೇಶ್ ರಾವ್ ಸುಧೀಂದ್ರ ರಾವ್ ಸಮಾಜದ ಮುಖ್ಯಸ್ಥರಾಗಿರುವ ಸುರೇಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.
ವರದಿ; ಅರುಣ ಭಟ್, ಕಾರ್ಕಳ
More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ