May 15, 2024

Bhavana Tv

Its Your Channel

ಪರಿಶಿಷ್ಠ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಕರಾವಳಿ ಭಾಗದ ಪರಿಶಿಷ್ಟ ಪಂಗಡ ಜನಾಂಗ.

ಕಾರ್ಕಳ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಬೇಡಿಕೆಗೆ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಜ್ಯ ಸರ್ಕಾರವು ಸ್ಪಂದಿಸಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲಾತಿಯನ್ನು ಶೇ.17 ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಇದ್ದ ಶೇ.3 ಮೀಸಲಾತಿಯನ್ನು ಶೇ. 7 ಕ್ಕೆ ಹೆಚ್ಚಿಸಿದ್ದಕ್ಕಾಗಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ಒಂದು ಸಾವಿರಕ್ಕೂ ಅಧಿಕ ಪರಿಶಿಷ್ಟ ಪಂಗಡದ ಜನರು ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರಾದ ವಿ ಸುನಿಲ್ ಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಮೀಸಲಾತಿ ಹೆಚ್ಚಳ ಮಾಡುವಂತೆ ಹಾಗೂ ಜನಾಂಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇರೆ ಬೇರೆ ಸರಕಾರಗಳು ಅಸ್ತಿತ್ವದಲ್ಲಿದ್ದ ಸಂಧರ್ಭದಲ್ಲಿಯೂ ಕೂಡ ಇಂದಿನ ಇಂಧನ ಹಾಗೂ ಕನ್ನಡ ಸಂಸ್ಖೃತಿ ಸಚಿವರ ನೇತೃತ್ವದಲ್ಲಿ ಸಂಭದಪಟ್ಟ ಇಲಾಖಾ ಸಚಿವರಲ್ಲಿ ಹಾಗೂ ಆಯಾ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿಯನ್ನು ಮಾಡಲಾಗಿತ್ತು. ಇದೀಗ ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಪರಿಶಿಷ್ಟ ಹಾಗೂ ಪರಿಶಿಷ್ಟ ಪಂಗಡದ ಜನರ ಬೇಡಿಕೆಯನ್ನು ಈಡೇರಿಸಿರುವುದು ರಾಜ್ಯದ ಇಡೀ ದಲಿತ ಸಮುದಾಯಕ್ಕೆ ಖುಷಿಯನ್ನು ಉಂಟುಮಾಡಿದೆ.
ಮಾನ್ಯ ಮುಖ್ಯಮಂತ್ರಿಗಳನ್ನು ಅಭಿನಂದಿಸುವ ಸಂಧರ್ಭದಲ್ಲಿ ಮಾನ್ಯ ಸಚಿವರಾದ ಸುನಿಲ್ ಕುಮಾರ್ ರವರೊಂದಿಗೆ, ಉಡುಪಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಲೆಕುಡಿಯ ಸಂಘದ ರಾಜ್ಯಧ್ಯಕ್ಷರಾದ ಶ್ರೀ ಶ್ರೀಧರ್ ಗೌಡ ಈದು, ಎಸ್ಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಎಸ್ ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯಕ್, ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಗೋಪಾಲ್ ಪಳಂಜಿ, ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ನಿತ್ಯಾನಂದ ನಾಯಕ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ವರದಿ; ಅರುಣ ಭಟ್. ಕಾರ್ಕಳ

error: