
ಕಾರ್ಕಳ:- ಕಾರ್ಕಳದ ಶ್ರೀ ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯುವ 44ನೇ ವರ್ಷದ ಶ್ರೀ ಶಾರದಾ ಪೂಜೆ ಸಮಿತಿ ಹಾಗೂ ಸಮಾಜ ಸೇವೆಯಲ್ಲಿ ಕಾರ್ಕಳದ ಟಿ ರಾಮಚಂದ್ರ ನಾಯಕ್ ಇವರುಗಳನ್ನು ಉಡುಪಿ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಕಾರ್ಕಳ ಭಾರತೀಯ ಜನತಾ ಪಾರ್ಟಿ ತೀವ್ರ ಸಂತಸ ವ್ಯಕ್ತಪಡಿಸಿದೆ.
ಜೊತೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಕೋಶವನ್ನು ನಿರ್ಮಾಣ ಮಾಡಿ ಅದಕ್ಕೆ ಬೇಕಾದ ಅನುದಾನವನ್ನು ಒದಗಿಸಿದ ಈಡಿಗ ಬಿಲ್ಲವ ನಾಮಧಾರಿಗಳು ಸೇರಿದಂತೆ 26 ಪಂಗಡಗಳನ್ನು ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ಧಿ ಮಾಡಲು ಈ ಸಮಾಜದ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆದೇಶ ಮಾಡಿರುವುದು ಶ್ಲಾಘನೀಯ.
ಈ ಎಲ್ಲ ವಿಚಾರಗಳಲ್ಲಿ ಸರಕಾರಕ್ಕೆ ಮಾರ್ಗದರ್ಶನ ನೀಡಿ ಎಲೆಮರೆಯ ಕಾಯಿಯಂತಿರುವ ಕಾರ್ಕಳದವರನ್ನೇ ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದಕ್ಕೆ ಕನ್ನಡ ಸಂಸ್ಕೃತಿ ಹಾಗೂ ಇಂಧನ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರ ಕಾರ್ಯವೈಕರಿಗೆ ಅಭಿನಂದಿಸುತ್ತೇವೆ ಎಂದು ಕಾರ್ಕಳ ಬಿಜೆಪಿ ವಕ್ತಾರ ಕೆ.ಎಸ್. ಹರೀಶ್ ಶೆಣೈ ಹಾಗೂ ಕೆ ಮುಕುಂದ ಶೆಣೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ