
ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀಮದ್‌ಭುವನೇಂದ್ರ ಪ್ರೌಢಶಾಲೆಯ ಅಧ್ಯಾಪಕರಾದ ಗಣೇಶ್ ಜಾಲ್ಸೂರ್ ಇವರು “ವಿದ್ಯಾರ್ಥಿಗಳ ಪುಸ್ತಕ ಓದಿ ಬಹುಮಾನ ಗೆಲ್ಲಿ” ಎಂಬ ಅನಿಸಿಕೆಗಳ ಪುಸ್ತಕವಾದ “ಸಂಕಲ್ಪ”ವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಶ್ರೀಯುತರು ವಿದ್ಯಾರ್ಥಿಗಳಿಗೆ ಸುಭಾಶ್ಚಂದ್ರ ಬೋಸ್‌ರವರ ಬಗ್ಗೆ ದಿಕ್ಸೂಚಿ ಭಾಷಣವನ್ನು ಮಾಡಿ ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂಬ ಕಿವಿಮಾತನ್ನು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಮುನಿರಾಜ ರೆಂಜಾಳ ಇವರು ನೇತಾಜಿ ಸುಭಾಶ್ಚಂದ್ರ ಬೋಸ್‌ರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ‘ಸಂಕಲ್ಪ’ದಲ್ಲಿ ಅತ್ಯುತ್ತಮ ರೀತಿಯಲ್ಲಿ ಅನಿಸಿಕೆಗಳನ್ನು ವ್ಯಕ್ತಪಡಿಸಿದ ವಿದ್ಯಾರ್ಥಿಗಳಿಗೆ ತರಗತಿವಾರು ಬಹುಮಾನವನ್ನು ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಕೆ. ಹರ್ಷಿಣಿ ಸ್ವಾಗತಿಸಿ, ಶಾಲಾ ನಾಯಕ ನೈತಿಕ್ ಜಿ. ಶೆಟ್ಟಿ ನಿರೂಪಿಸಿ ಕನ್ನಡ ಶಿಕ್ಷಕಿ ಶ್ರೀಮತಿ ಸಾವಿತ್ರಿ ಎಲ್ಲರನ್ನೂ ವಂದಿಸಿದರು.

More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ