
ಕಾರ್ಕಳ : ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಿಶೋರ ಕುಮಾರ ಕೊಡ್ಗಿಯವರು ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ, ಅಭ್ಯಾಸ ವರ್ಗವು ಸಹಕಾರಿ ಸಂಘಗಳ ಹೊಸ ಕಾಯ್ದೆ ಕಾನೂನುಗಳ ಪರಿಜ್ಞಾನವನ್ನು ಮೂಡಿಸಿಕೊಳ್ಳಲು ಮತ್ತು ಸಹಕಾರಿ ಜ್ಞಾನವನ್ನು ಪಸರಿಸಿ ಪರಸ್ಪರ ವಿಶ್ವಾಸವನ್ನು ಹೆಚ್ಚಿಸುವಲ್ಲಿ ಸಹಕಾರಿ ಯಾಗಲಿ ಎಂದು ಶುಭ ಹಾರೈಸಿದರು.
ಕುಂದಾಪುರ ತಾಲೂಕಿನ ಸಹಕಾರ ಭಾರತೀಯ ತಾಲೂಕು ಅಧ್ಯಕ್ಷರಾದ ಶ್ರೀ ದಿನಪಾಲ ಶೆಟ್ಟಿಯವರು ವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ಲೋಕಸಭಾ ಚುನಾವಣೆಯ ನಂತರ ಕುಂದಾಪುರ ತಾಲೂಕಿನಲ್ಲಿ ಸಹಕಾರಿಗಳ ” ಬೃಹತ್ ಸಮಾವೇಶ” ವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಹಕಾರ ಭಾರತಿ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಬೋಳ ಸದಾಶಿವ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರಾದ ಸಾಣೂರು ನರಸಿಂಹ ಕಾಮತ್ ವಹಿಸಿದ್ದರು. ಉದ್ಘಾಟನಾ ಸಮಾರಂಭದ ಬಳಿಕ ನಡೆದ ಮಾಹಿತಿ ಶಿಬಿರದ ಮೊದಲ ಅವಧಿಯಲ್ಲಿ ” ಸಹಕಾರ ಭಾರತಿಯ ಹುಟ್ಟು ಮತ್ತು ಬೆಳವಣಿಗೆ “ಯ ಬಗ್ಗೆ ಸಹಕಾರ ಭಾರತಿ ಮೈಸೂರು ವಿಭಾಗದ ಸಂಘಟನಾ ಪ್ರಮುಖರಾದ ಶ್ರೀ ಮೋಹನ್ ಕುಮಾರ್ ಕುಂಬಳೇಕರ್ ರವರು ಸವಿವರ ವಾದ ಮಾಹಿತಿ ಮಾರ್ಗದರ್ಶನ ನೀಡಿದರು.
ಸಹಕಾರಿ ಕಾಯಿದೆ ಮತ್ತು ಸಹಕಾರಿ ಸಂಸ್ಥೆಗಳ ಆಡಳಿತ ನಿರ್ವಹಣೆ ಕುರಿತು ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಕಿರಿಯ ಸಹಾಯಕರಾದ ಶ್ರೀ ವಿನಾಯಕ ಕನ್ನಂತರವರು ಸುಧೀರ್ಘವಾದ ಮಾಹಿತಿ ಮಾರ್ಗದರ್ಶನ ನೀಡಿ ಸಹಕಾರಿಗಳ ಜೊತೆಗೆ ನೇರ ಸಂವಾದ ನಡೆಸಿದರು.
ಸಹಕಾರ ಭಾರತಿ ರಾಷ್ಟ್ರೀಯ ಮತ್ಸ್ಯ ಪ್ರಕೋಷ್ಟದ ಸಹ ಸಂಚಾಲಕರು ಹಾಗೂ ಖ್ಯಾತ ವಕೀಲರಾದ ಮಂಜುನಾಥ ಎಸ್ಕೆ ಯವರು ರಾಜ್ಯ ಸರಕಾರವು ಸಹಕಾರಿ ಕಾಯ್ದೆಯಲ್ಲಿ ತಂದಿರುವ ನೂತನ ತಿದ್ದುಪಡಿಗಳ ಬಗ್ಗೆ ಮಾಹಿತಿ ನೀಡಿದರು
ಹಳ್ಳಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ ಶೆಟ್ಟಿಯವರು ಸ್ವಾಗತಿಸಿ ,ಸಹಕಾರ ಭಾರತಿ ಕುಂದಾಪುರ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀ ದಯಾನಂದ ರಾವ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಣೆ ಗೈದರು.
ಭಾವನಾ ಟಿವಿಗಾಗಿ ಅರುಣ ಭಟ್ಟ್ ಕಾರ್ಕಳ
More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ