April 26, 2024

Bhavana Tv

Its Your Channel

ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಗುಂಡಿಕ್ಕಿಕೊoಡು ಆತ್ಮಹತ್ಯೆ

ಕುಂದಾಪುರ : ಉದ್ಯಮಿ, ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ ರಾವ್ ಗುರುವಾರ ಬೆಳಿಗ್ಗೆ ೬.೧೫ರ ಸುಮಾರಿಗೆ ಕೋಟೇಶ್ವರ ಸಮೀಪದ ಕುದ್ರೆಕೆರೆ ಬೆಟ್ಟು ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ತನ್ನದೇ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕರಾಗಿದ್ದರು. ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಬೆಳಿಗ್ಗೆನ ಜಾವ ತನ್ನ ಕಾರಿನಲ್ಲಿ ಗಣೇಶ್ ಶೆಟ್ಟಿಯವರ ಮನೆಗೆ ಬಂದು ಕಾರನ್ನು ಗೇಟ್ ಹೊರಗೆ ಪಾರ್ಕ್ ಮಾಡಿ ಮನೆಯ ಸಿಟೌಟಿಗೆ ಬಂದು ಈ ಕೃತ್ಯ ಮಾಡಿಕೊಂಡಿದ್ದಾರೆ.

ಕುAದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಸರ್ಕಲ್ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಪಿಎಸ್‌ಐ ಸದಾಶಿವ ಗವರೋಜಿ ಮೊದಲಾದವರು ಭೇಟಿ ನೀಡಿದ್ದಾರೆ.

ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿದ್ದು ತನಗಾದ ಸಮಸ್ಯೆ ಬಗ್ಗೆ ಉಲ್ಲೇಖ ಮಾಡಿದ್ದಾರೆ.

ಕಟ್ಟೆ ಭೋಜಣ್ಣ ತನ್ನ ಕಚೇರಿಗೆ ಸಂಬAಧಿಸಿದ ಲೆಟರ್ ಹೆಡ್ ನಲ್ಲಿ ಡೆತ್ ನೋಟ್ ಬರೆದಿದ್ದು ಹಣಕಾಸಿನಲ್ಲಿ ತನಗಾದ ಅನ್ಯಾಯಾದ ಬಗ್ಗೆ ಅದರಲ್ಲಿ ಉಲ್ಲೇಖ ಮಾಡಿದ್ದಾರೆ. ಡೆತ್ ನೋಟ್ ನಲ್ಲಿ ಮೊಳಹಳ್ಳಿ ಗಣೇಶ್ ಶೆಟ್ಟಿ, ಇಸ್ಮಾಯಿಲ್ ಹಂಗಳೂರು ಹೆಸರು ಪ್ರಸ್ತಾಪ ಮಾಡಿರುವ ಭೋಜಣ್ಣ, ಇವರಿಬ್ಬರು ಗೋಲ್ಡ್ ಜ್ಯುವೆಲ್ಲರಿ ಹೆಸರಿನಲ್ಲಿ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ೨೦೧೨ ಪೆಬ್ರವರಿ ೩ ರಂದು ೩ ಕೋಟಿ ೩೪ ಲಕ್ಷ ನಗದು, ೫ ಕೆ.ಜಿ ಚಿನ್ನ ಪಡೆದುಕೊಂಡಿದ್ದರು. ಆ ಬಳಿಕ ನಗ-ನಗದು, ಅದಕ್ಕೆ ಸಲ್ಲಬೇಕಾದ ಬಡ್ಡಿಯನ್ನೂ ವಾಪಾಸ್ ಮರಳಿಸಿರಲಿಲ್ಲ. ಈ ವಿಚಾರದಲ್ಲಿ ಹಲವು ಬಾರಿ ಜನಪ್ರತಿನಿಧಿಗಳ ನೇತೃತ್ವದಲ್ಲಿ ಪಂಚಾಯತಿಕೆ ಮಾಡಿದ್ದು ವಾಯಿದೆ ಪಡೆದಿದ್ದರು. ಈವರೆಗೆ ೯ ಕೋಟಿ ಮೊತ್ತದ ಹಣ, ಚಿನ್ನ ವಾಪಾಸ್ ನೀಡದೆ ಮೋಸ ಮಾಡಿದ್ದು ಗಣೇಶ್ ಶೆಟ್ಟಿ ಮೊಳಹಳ್ಳಿ ಮನೆಗೆ ತಿರುಗಿ ತಿರುಗಿ ಸಾಕಾಯ್ತು. ಅವರ ಮನೆಯಲ್ಲಿಯೇ ನನ್ನ ರಿವಾಲ್ವರ್ ಇಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಗಣೇಶ್ ಶೆಟ್ಟಿ ಮೊಳಹಳ್ಳಿ, ಇಸ್ಮಾಯಿಲ್ ಅವರಿಂದ ಹಣ ರಿಕವರಿ ಮಾಡಿ, ಆ ಹಣವನ್ನು ಮನೆಯವರಿಗೆ ಕೊಡಿಸಿ ಎಂದು ಆತ್ಮಹತ್ಯೆಗೆ ಶರಣಾದ ಕಟ್ಟೆ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕುಂದಾಪುರ ಠಾಣೆ ಎಸ್.ಎಚ್.ಓ ಅವರಿಗೆ ಬರೆದ ಡೆತ್ ನೋಟ್‌ನಲ್ಲಿ ಈ ಉಲ್ಲೇಖ ಮಾಡಲಾಗಿದೆ. ಇನ್ನು ವೈರಲ್ ಆದ ಈ ಡೆತ್ ನೋಟ್‌ನಲ್ಲಿ ಎರಡು ಮೂರು ಬಾರಿ ದಿನಾಂಕ ಬದಲಾಯಿಸಿದ್ದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಸಮಗ್ರ ತನಿಖೆಯಿಂದಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿದುಬರಬೇಕಿದೆ.

error: