April 26, 2024

Bhavana Tv

Its Your Channel

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಸಮಾಜವಾದಿ ಪಕ್ಷ ಖಂಡಿಸುತ್ತದೆ- ನಾಗರಾಜ ನಾಯ್ಕ

ಸಿದ್ದಾಪುರ:ಕರ್ನಾಟಕದಲ್ಲಿ ಜಾರಿಗೊಳಿಸಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸಿ ಈ ನೀತಿಯನ್ನು ಹಿಂಪಡಿಯಬೇಕೆoದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದರೆ. ಪೋಲಿಸರು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನೀಯ. ಸಮಾಜವಾದಿ ಪಕ್ಷ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸುತ್ತದೆ. ಸರಕಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ದ್ವನಿಯನ್ನು ಅಡಗಿಸುವ ಕಾರ್ಯ ಮಾಡುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವುದನ್ನು ಬಿಟ್ಟು ಸರಕಾರ ಸಂಬoಧ ಪಟ್ಟವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು.


ನೀವು ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರ ಜೊತೆ ಚರ್ಚಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಿರುವುದು ಸರಿಯಾದ ಕ್ರಮವಲ್ಲ. ಕೂಡಲೆ ಮುಖ್ಯಮಂತ್ರಿಗಳು ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರ ಜೊತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕು.
ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಸಮಾಜವಾದಿ ಪಕ್ಷದ ಸಂಪೂರ್ಣ ಬೆಂಬಲ ಇದೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡುವ ಬದಲು ವಿದ್ಯಾರ್ಥಿಗಳ ರಕ್ಷಣೆಯನ್ನು ಸರಕಾರ ಮಾಡಬೇಕೆಂದು ಸಮಾಜವಾದಿ ಪಕ್ಷ ಆಗ್ರಹಿಸುತ್ತದೆ ಎಂದು ಸಮಾಜವಾದಿ ಪಕ್ಷದ ಕಾರ್ಮಿಕ ವಿಭಾಗದ ಕರ್ನಾಟಕ ರಾಜ್ಯಾಧ್ಯಕ್ಷರಾದ ನಾಗರಾಜ ನಾಯ್ಕ ಹೇಳಿದ್ದಾರೆ.

error: