March 20, 2025

Bhavana Tv

Its Your Channel

ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಮರ್ಕಜ್ ಗೆ ಜಿಲ್ಲೆಯಿಂದ ೨೫ ಮಂದಿ

ಕಾರವಾರ ; ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಮರ್ಕಜ್ ಗೆ ಉತ್ತರ ಕನ್ನಡ ಜಿಲ್ಲೆಯಿಂದ ೨೫ ಮಂದಿ ತೆರಳಿದ್ದರು ಎಂಬ ಪಟ್ಟಿ ಜಿಲ್ಲೆಗೆ ಬಂದಿದೆ. ಆದರೆ, ಇದರಲ್ಲಿ ಎಂಟು ಜನ ಮರ್ಕಜ್ ನಲ್ಲಿ ಭಾಗವಹಿಸಿದ್ದವರನ್ನು ಗುರುತಿಸಲಾಗಿದ್ದು, ಇಬ್ಬರ ಗಂಟಲಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಉಳಿದವರನ್ನು ಸ್ಕ್ರೀನ್ ಮಾಡಲಾಗಿದೆ. ಇನ್ನಿತರರ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.

ಲಾಕ್ ಡೌನ್ ನಿಷೇಧಾಜ್ಞೆ ಉಲ್ಲಂಘಿಸಿ ಮಸೀದಿಯಲ್ಲಿ ನಮಾಜ್; ೨೦ ಮಂದಿ ಅರೆಸ್ಟ್!

ಹಳಿಯಾಳದಲ್ಲಿ ಲಾಕ್ ಡೌನ್ ನಿಷೇಧಾಜ್ಞೆ ಇದ್ದರೂ ಸಹ ಮಸೀದಿಯಲ್ಲಿ ನಮಾಜ್ ಮಾಡಿರುವ ೨೦ ಮಂದಿಯನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲು ಮಾಡಲಾಗಿದೆ.

ನಿಷೇಧಾಜ್ಞೆ ಉಲ್ಲಂಘನೆ ಮಾಡಿ ಮಸೀದಿಯಲ್ಲಿ ಗುಂಪಾಗಿ ನಮಾಜ್ ಮಾಡಲಾಗಿದೆ. ಕೊರೋನಾ ಸೋಂಕು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಅಗತ್ಯ ವಸ್ತುಗಳಿಗೆ, ತುರ್ತು ಪರಿಸ್ಥಿತಿಯನ್ನು ಹೊರತುಪಡಿಸಿ ಬೇರೆ ಯಾವ ಸಂದರ್ಭದಲ್ಲೂ ಮನೆಯಿಂದ ಹೊರ ಬರದಂತೆ ಆದೇಶವಿದ್ದರೂ ಅದನ್ನು ಉಲ್ಲಂಘನೆ ಮಾಡಿ ನಮಾಜ್ ಮಾಡಲಾಗಿದೆ. ಹೀಗಾಗಿ ಎಲ್ಲರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

source : nudijenu

error: