February 13, 2025

Bhavana Tv

Its Your Channel

ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಪೋಕ್ಸೋ ಪ್ರಕರಣ

ಹೊನ್ನಾವರ ; ಅಪ್ರಾಪ್ತ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ಯುವಕನೋರ್ವ, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ಯುವತಿಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಲವಂತದಿAದ ಲೈಂಗಿಕ ಸಂಪರ್ಕ ಬೆಳೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಸರಳಗಿಯವನೇ ಆಗಿರುವ ನಾಗರಾಜ ಸುಬ್ರಾಯ ಉಪ್ಪಾರ (೨೬) ಎಂಬಾತನೇ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪಿಯಾಗಿದ್ದಾನೆ. ಅಪರಾಧ ವಿಭಾಗದ ಪಿ.ಎಸ್.ಐ ಸಾವಿತ್ರಿ ನಾಯಕ ಅವರು ಪ್ರಕರಣದ ತನಿಖೆ ನಡೆಸುತ್ತಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

error: