
ಹೊನ್ನಾವರ : ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳಿಂದಾಗಿ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜನಾಭಿಪ್ರಾಯ ರೂಪಿಸಲು ಮೊದಲನೇ ಹಂತದಲ್ಲಿ ರಾಜ್ಯದ ೧೦೦ ವಿಧಾನ ಸಭಾ ಕ್ಷೇತ್ರಗಳಲ್ಲಿ “ಜನ ಧ್ವನಿ” ಜಾಥಾ” ಕಾರ್ಯಕ್ರಮದ ಉದ್ಘಾಟನೆಯನ್ನು ಇಂದು ಬುಧವಾರ ಬೆಳಗ್ಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಛೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ನಂತರ ದೇವನಹಳ್ಳಿಯಲ್ಲಿ ಪಾದಯಾತ್ರೆ ಮತ್ತು ಸಾರ್ವಜನಿಕ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ರವರು ವಹಿಸಿದ್ದರು. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ರವರು, ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆರವರು, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಎಸ್.ಆರ್ ಪಾಟೀಲ್ ರವರು, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಭಾಗವಹಿಸಿ ಕೇಂದ್ರದ ಧೋರಣೆಯ ವಿರುದ್ಧ ಪ್ರತಿಭಟಿಸಲಾಯಿತು. ಈ ಪ್ರತಿಭಟನೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣಾ ನಾಯ್ಯ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ ಮಜೀದ ಶೇಖ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್ ತೆಂಗೇರಿ,ಭಟ್ಕಳ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ ,ಭಟ್ಕಳ ಕಿಸಾನ ಕಾಂಗ್ರೆಸನ ಶಿವರಾಮ ನಾಯ್ಕ ಜಿಲ್ಲೆಯಿಂದ ಭಾಗವಹಿಸಿದ್ದರು
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.