March 29, 2024

Bhavana Tv

Its Your Channel

ಭಟ್ಕಳದಲ್ಲಿ ಬ್ರಹತ್ ರಕ್ತದಾನ ಶಿಭಿರ

ಭಟ್ಕಳ ; ನಾವು ಜನಸಾಮಾನ್ಯರಲ್ಲಿ ರಕ್ತದಾನದಿಂದ ಹಿಡಿದು ಅಂಗಾAಗ ದಾನ, ದೇಹದಾನ, ನೇತ್ರದಾನದ ಕುರಿತು ತಿಳುವಳಿಕೆಯನ್ನು ಮೂಡಿಸಿ ಅವರನ್ನು ಪ್ರೇರೇಪಿಸುವ ಕೆಲಸ ಮಾಡಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಆನಂದು ಗಾಂವಕರ್ ಅವರು ಹೇಳಿದರು.

ಅವರು ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಭಟ್ಕಳ ತಾಲೂಕಾ ಘಟಕ, ಲಯನ್ಸ್ ಕ್ಲಬ್ ಮುರ್ಡೇಶ್ವರ, ತಾಲೂಕಾ ಆಸ್ಪತ್ರೆ ಭಟ್ಕಳ ಹಾಗೂ ರಕ್ತನಿಧಿ ಉಡುಪಿ ಇವುಗಳ ಸಹಯೋಗದೊಂದಿಗೆ ತಾಲೂಕಾ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಅವರು ಸರಕಾರಿ ಆಸ್ಪತ್ರೆ ಸೇವೆ ನೀಡುವಲ್ಲಿ ಮುಂದೆ ಇದ್ದು ಕಳೆದ ಎರಡು ವರ್ಷಗಳಲ್ಲಿ ಅನೇಕ ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕ ರಕ್ತದ ಅವಶ್ಯಕತೆ ಇದ್ದವರಿಗೆ ಪೂರೈಸುತ್ತಿದ್ದೇವೆ. ಶಿಕ್ಷಕರ ಸಂಘದ ಪದಾಧಿಕಾರಿಗಳು ತಾವಾಗಿಯೇ ಬಂದು ರಕ್ತದಾನ ಮಾಡುತ್ತೇವೆ ಎನ್ನುವ ಮೂಲಕ ಇತರ ಸಂಘಟನೆಗಳಿಗೆ ಮಾದರಿಯಾಗಿದ್ದಾರೆ ಎಂದರು.
ಮುಖ್ಯ ಅತಿಥಿ ಉಡುಪಿ ರಕ್ತನಿಧಿ ವೈದ್ಯೆ ಡಾ. ವೀಣಾಕುಮಾರಿ ಮಾತನಾಡಿ ಹಲವಾರು ಸಂದರ್ಭದಲ್ಲಿ ತುರ್ತು ರಕ್ತದ ಅವಶ್ಯಕತೆ ಇದ್ದಾಗ ದೂರದ ಊರಿಗೆ ಹೋಗಿ ರಕ್ತವನ್ನು ಪಡೆದು ಬರುವಷ್ಟರಲ್ಲಿ ರೋಗಿಯ ಪರಿಸ್ಥಿತಿ ಗಂಭೀರವಾಗಿರುತ್ತದೆ. ಆದರೆ ಕಳೆದ ಎರಡು ವರ್ಷಗಳಿಂದ ಭಟ್ಕಳ ರಕ್ತ ಶೇಖರಣಾ ಕೇಂದ್ರದಲ್ಲಿ ಅನೇಕರಿಗೆ ಸಹಾಯವಾಗಿದೆ. ಕೇವಲ ಸರಕಾರಿ ಆಸ್ಪತ್ರೆ ಮಾತ್ರವಲ್ಲ ಖಾಸಗೀ ಆಸ್ಪತ್ರೆಯವರಿಗೂ ಕೂಡಾ ರಕ್ತ ದೊರೆಯುತ್ತಿರುವುದರಿಂದ ಅನೇಕ ಜೀವ ಉಳಿಯುವುದಕ್ಕೆ ಸಹಕಾರಿಯಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ತಾಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಮೊಹನ ನಾಯ್ಕ ಮಾತನಾಡಿ ಸಮಾಜಮುಖಿ ಕಾರ್ಯಕ್ರಮ ಮಾಡುತ್ತಿರುವ ಶಿಕ್ಷಕರ ಸಂಘದ ಕಾರ್ಯ ಎಲ್ಲರಿಗೂ ಮಾದರಿಯಾಗಿದ್ದು ತಮ್ಮ ಸಂಪೂರ್ಣ ಸಹಕಾರ ಇದೆ ಎಂದರು.
ಮುಖ್ಯ ಅತಿಥಿ ಲಯನ್ಸ್ ಕ್ಲಬ್ ಅಧ್ಯಕ್ಷ ಗೌರೀಶ ನಾಯ್ಕ, ಪ್ರಾಥಮಿಕ ಶಿಕ್ಷಣ ಇಲಾಖೆಯ ಯಲ್ಲಮ್ಮ ಮಾತನಾಡಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ಉಲ್ಲಾಸ್ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಮೇಧಾ ಕೆ.ಕೆ. ಪ್ರಾರ್ಥಿಸಿದರು. ಸಂಘದ ಕಾರ್ಯದರ್ಶಿ ಎಂ.ಡಿ. ರಫೀಕ್ ಸ್ವಾಗತಿಸಿದರು. ಲಯನ್ಸ್ ಕಾರ್ಯದರ್ಶಿ ನಾಗೇಶ ಮಡಿವಾಳ ನಿರ್ವಹಿಸಿದರು. ಸಂಘದ ಉಪಾಧ್ಯಕ್ಷೆ ಪಿ.ಎ. ಗೋಮ್ಸ್ ವಂದಿಸಿದರು.ತಾಲೂಕಾ ಘಟಕದ ರಾಜ್ಯ ಪರಿಷತ್ ಸದಸ್ಯ ಪ್ರಕಾಶ ಶಿರಾಲಿ,ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ಶಿಬಿರದಲ್ಲಿ ಒಟ್ಟೂ ೭೧ ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

error: