
ಅಂಕೋಲಾ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಸಭೆಗೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಅಧಿಕಾರಿ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ೬೩ ರ ಬಾಳೆಗುಳಿ ಬಳಿ ನಡೆದಿದೆ. ಸಿದ್ದಾಪುರ ತಾಲೂಕಿನ ಲೋಕೋಪಯೋಗಿ ಇಲಾಖೆಯ ಎ.ಇ.ಇ ಮೃತಪಟ್ಟಿದ್ದು, ನಾಲ್ವರು ಅಧಿಕಾರಿಗಳು ಗಂಭೀರ ಗಾಯಗೊಂಡಿದ್ದಾರೆ.
ಈ ವೇಳೆ ಅಂಕೋಲದ ಬಾಳೆಗುಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅನಾಹುತ ಸಂಭವಿಸಿದೆ. ಸಿದ್ದಾಪುರ ತಾಲೂಕಿನ ಲೋಕೋಪಯೋಗಿ ಇಲಾಖೆ ಎಇಇ ಮುದುಕಣ್ಣನವರ್(೫೮) ಮೃತಪಟ್ಟ ಅಧಿಕಾರಿ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡವರನ್ನು ಅಂಕೋಲ ಹಾಗೂ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಕೃಷ್ಣಾರೆಡ್ಡಿ, ಚೇತನ್, ಕಿರಣ ಪಾಟೇಲ್ ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಸಾಗಿಸಲಾಗುತ್ತಿದೆ.
ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ನೆರೆ ಹಾಗೂ ಕೊರೋನಾ ಸಂಬoಧ ಅಧಿಕಾರಿಗಳ ಸಭೆ ಇದಾಗಿದ್ದು ,ಸಭೆಗೆ ಲೋಕೋಪಯೋಗಿ ಇಲಾಖೆಯ ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನ ಇಂಜಿನಿಯರ್ ಗಳು ಒಂದೇ ಕಾರಿನಲ್ಲಿ ಬರುತ್ತಿದ್ದರು ಎನ್ನಲಾಗಿದೆ.ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ
More Stories
ಕಾವ್ಯ ಕಟ್ಟುವುದಲ್ಲ-ಬದಲಿಗೆ ಹುಟ್ಟುವುದು: ಮಂಜುನಾಥ ಗಾಂವಕರ, ಬರ್ಗಿ
೧೮ ವರ್ಷದ ಯುವಕ ರವೀಶ್ ಹರಿಕಾಂತ್ನ ಕಲಾ ಪ್ರೌಢಿಮೆ
“ಕನ್ನಡ ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ -ವೈಶಾಲಿ ಹೆಗಡೆ