April 10, 2025

Bhavana Tv

Its Your Channel

ಸುಂಕಸಾಳದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಂಸದ ಅನಂತಕುಮಾರ ಹೆಗಡೆ

ವರದಿ: ವೇಣುಗೋಪಾಲ ಮದ್ಗುಣಿ

ಅಂಕೋಲಾ:- ಕೆನರಾ ಲೋಕಸಭಾ ಕ್ಷೇತ್ರದ ಸಂಸದರಾದ ಅನಂತಕುಮಾರ ಹೆಗಡೆಯವರು ಸುಂಕಸಾಳದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿಗೆ (3 ಕೋಟಿ 86 ಲಕ್ಷ ರೂ.) ಭೂಮಿಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕಾರವಾರ ಕ್ಷೇತ್ರದ ಶಾಸಕರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ, ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ಸುಂಕಸಾಳ ಗ್ರಾಮಪಂಚಾಯತ ಅಧ್ಯಕ್ಷರಾದ ಸದಾನಂದ ನಾಯಕ, ಉತ್ತರಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ವೆಂಕಟೇಶ ನಾಯಕ, ಅಂಕೋಲಾ ಮಂಡಲ ಬಿಜೆಪಿ ಅಧ್ಯಕ್ಷರಾದ ಸಂಜಯ ನಾಯ್ಕ, ಪಂಚಾಯತ ಉಪಾಧ್ಯಕ್ಷರು-ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಮತ್ತು ಸರ್ಕಾರಿ ಅಧಿಕಾರಿಗಳು, ಗ್ರಾಮದ ಜನರು ಉಪಸ್ಥಿತರಿದ್ದರು.

error: