March 12, 2025

Bhavana Tv

Its Your Channel

ಐಸಿಟಿ ಸ್ಮಾರ್ಟ್ ಕ್ಲಾಸ್ ರೂಮ್‌ಗಳ ಉದ್ಘಾಟನೆ ಮಾಡಿದ ಶಾಸಕ ಸುನೀಲ್ ನಾಯ್ಕ

ಭಟ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿಜಿಟಲ್ ಕಲಿಕೆ ಯೋಜನೆಯಡಿಯಲ್ಲಿ ಐಸಿಟಿ ಸ್ಮಾರ್ಟ್ ಕ್ಲಾಸ್ ರೂಮ್‌ಗಳ ಉದ್ಘಾಟನೆಯನ್ನು ಶಾಸಕ ಸುನೀಲ್ ಬಿ. ನಾಯ್ಕ ನೆರವೇರಿಸಿದರು.

ನಂತರ ಮಾತನಾಡಿದ ಅವರು ಪ್ರಸ್ತುತ ಶಿಕ್ಷಣದ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಗೆ ಸರ್ಕಾರ ಹೆಚ್ಚಿನ ಮಹತ್ವವನ್ನು ಕೊಟ್ಟಿದ್ದು ಅದಕ್ಕನುಗುಣವಾಗಿ ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ಸಾಕಷ್ಟು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಡಿಜಿಟಲ್ ಕಲಿಕೆ ಇಂದಿನ ಕೋವಿಡ್-೧೯ ಪರಿಸ್ಥಿತಿಯಲ್ಲಿ ಅತ್ಯವಶ್ಯಕವಾಗಿದ್ದು ಇದರ ಪ್ರಯೋಜನ ವಿದ್ಯಾರ್ಥಿಗಳು ಪಡೆದುಕೊಳ್ಳಲಿ ಎಂದು ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಭಾಗೀರಥಿ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿ ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯ ಎಂ.ಆರ್.ನಾಯ್ಕ ಮಾತನಾಡಿ ಸ್ಮಾರ್ಟ್ ಯುಗದಲ್ಲಿ ವಿದ್ಯಾರ್ಥಿಗಳು ಸಹ ಸ್ಮಾರ್ಟ್ ಆಗಬೇಕು. ಕಲಿಕೆಯನ್ನು ಉತ್ತಮವಾಗಿ ಮಾಡುವಂತೆ ಕರೆ ನೀಡಿದರು. ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯ ರವಿ ನಾಯ್ಕ ಜಾಲಿ, ಜಯಶ್ರೀ ಖಾರ್ವಿ ಉಪಸ್ಥಿತರಿದ್ದರು.

error: