
ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ ೧ ರಂದು ಗುರುವಾರ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು.
ಮಂಗಳವಾರ ಸಂಜೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭಾಸ್ಕರ ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಜುಲೈ ೧ ರಂದು ನಡೆಯುವ ಪತ್ರಿಕಾ ದಿನಾಚರಣೆಯ ಪ್ರಯುಕ್ತ ನಿವೃತ್ತ ಶಿಕ್ಷಕ ಹಾಗೂ ಹಿರಿಯ ಸಹಕಾರಿ ಧುರೀಣ ಡಿ.ಬಿ.ನಾಯ್ಕ ಹಾಗೂ ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಸಾಮಾಜಿಕ ಕಾರ್ಯಕರ್ತ ರುಕ್ನುದ್ದೀನ್ ನಿಸ್ಸಾರ್ ಅಹ್ಮದ್ ಅವರನ್ನು ಗೌರವಿಸಿ ಸನ್ಮಾನಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ಸಂಘದ ಜಿಲ್ಲಾ ಸಮಿತಿ ಸದಸ್ಯ ಫಯ್ಯಾಜ್ ಮುಲ್ಲಾ, ಮಾಜಿ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ್, ಖಜಾಂಚಿ ಇನಾಯತುಲ್ಲಾ ಗವಾಯಿ, ಉಪಾಧ್ಯಕ್ಷ ಅತೀಕುರ್ ರೆಹಮಾನ್ ಶಾಬಂದ್ರಿ, ರಿಜ್ವಾನ್ ಗಂಗಾವಳಿ, ಸತೀಶ ಕುಮಾರ್, ಪ್ರಸನ್ನ ಭಟ್ಟ, ಉದಯ ನಾಯ್ಕ, ಶೈಲೇಶ ವೈದ್ಯ ಮುಂತಾದವರುಉಪಸ್ಥಿತರಿದ್ದರು.
More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ