March 12, 2025

Bhavana Tv

Its Your Channel

ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ

ಭಟ್ಕಳ ನಗರದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ನಾಯಕ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಕೋವಿಡ್ ಪಿಡುಗನ್ನು ತೊಲಗಿಸಲು ಪ್ರತಿಯೊಬ್ಬರೂ ಲಸಿಕೆ ತೆಗೆದುಕೊಳ್ಳುವುದೇ ಉತ್ತಮ ಪರಿಹಾರವಾಗಿದೆ ಎಂದರು.
ಉಪಸ್ಥಿತರಿದ್ದ ವೈದ್ಯೆ ಡಾ. ಪಲ್ಲವಿ ಮಾತನಾಡಿ ಕೋವಿಡ್ ಸೋಂಕು ಹರಡದಂತೆ ಜಾಗೃತೆ ವಹಿಸುವುದರ ಜೊತೆಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಪ್ರತಿಯೊಬ್ಬರೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದರು.
ಭಟ್ಕಳ ಎಜ್ಯುಕೇಶನ್ ಟ್ರಷ್ಟನ ಟ್ರಸ್ಟೀ ಮ್ಯಾನೇಜರ್ ರಾಜೇಶ್ ನಾಯಕ, ಪ್ರಾಂಶುಪಾಲ ಶ್ರೀನಾಥ್ ಪೈ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ಹಾಕಲಾಯಿತು.

error: