
ಭಟ್ಕಳ ತಾಲೂಕಿನ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬೈಲೂರು ಗ್ರಾಮದ ಎಡಬಡ್ರು ರಸ್ತೆ ರೈಲ್ವೇ ಬ್ರಿಡ್ಜ್ ಹತ್ತಿರ ೫೧೮ ಗ್ರಾಂ ತೂಕದ ಗಾಂಜಾವನ್ನು ಮಾರಾಟ ಮಾಡಲು ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಗಾಂಜಾ ಸಹಿತ ಬಂಧಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ಖಚಿತ ಮಾಹಿತಿಯ ಮೇರೆಗೆ ಮುರ್ಡೇಶ್ವರ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿಗಳು ಬೈಲೂರು ರೈಲ್ವೇ ಬ್ರಿಡ್ಜ್ ಬಳಿಯಲ್ಲಿ ಹಡವಿನಕೋಣೆ ಶಿರೂರಿನವರಾದ ಮಹಮ್ಮದ್ ಝುಹೇರ್ ತಂದೆ ಮಹಮ್ಮದ್ ಜಾಹಿದ್ ಹಸನ್ (೨೨) ಹಾಗೂ ಅಫ್ನಾನ್ ಅಹಮ್ಮದ್ ತಂದೆ ಸೈಯದ್ ಅಹ್ಮದ್ ಮಾಮ್ದು (೧೯) ಎನ್ನುವವರನ್ನು ವಶಕ್ಕೆ ಪಡೆದು ವಿಚಾರಿಸುವಲ್ಲಿ ಗಾಂಜಾ ಮರಾಟ ಮಾಡುವ ಉದ್ದೇಶದಿಂದ ಕಪ್ಪು ಪ್ಲಾಸ್ಟಿಕ್ ಕೊಟ್ಟೆಯಲ್ಲಿ ಗಾಂಜಾವನ್ನು ಇಟ್ಟುಕೊಂಡಿರುವುದು ತಿಳಿದು ಬಂದಿದೆ. ತಕ್ಷಣ ಅವರನ್ನು ದಸ್ತಗಿರಿ ಮಾಡಿದ್ದು ಪ್ರಕರಣವನ್ನು ಎ.ಎಸ್.ಐ. ವರದರಾಜ ವಿ.ಗುನಗಾ ಅವರು ದಾಖಲಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ