July 26, 2021

Bhavana Tv

Its Your Channel

ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ

ಭಟ್ಕಳ: ಬಿಜೆಪಿ ಭಟ್ಕಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ತಾಲೂಕಿನ ಆಸರಕೇರಿ ನಾಮಧಾರಿ ಸಭಾಭವನದಲ್ಲಿ ನೆರವೇರಿತು. ಸಭಾ ಕಾರ್ಯಕ್ರಮವನ್ನು ರಾಜ್ಯ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಸಹಪ್ರಭಾರಿ ಪ್ರಸನ್ನ ಕರೆಕ್ಕೆ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪಕ್ಷದ ಶಿಸ್ತು ಹಾಗೂ ಕೃಷಿ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಸುಬ್ರಾಯ ದೇವಾಡಿಗ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ ಹಾಗೂ ಚಂದ್ರು | ಎಸಳೆ, ಪಕ್ಷದ ಸಂಘಟನೆ ಹಾಗೂ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಮಂಡಲ ಪ್ರಭಾರಿ ಪ್ರಶಾಂತ್ ನಾಯ್ಕ, ಜಿಲ್ಲಾ ಹಿಂದುಳಿದ ಮೋರ್ಚಾ ಪ್ರಭಾರಿ ಈಶ್ವರ ನಾಯ್ಕ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಾನಿ ಶಾಂತಾರಾಮ್, ನಿಕಟಪೂರ್ವ ಅಧ್ಯಕ್ಷ ರಾಜೇಶ್ ನಾಯ್ಕ ಉಪಸ್ಥಿತರಿದ್ದರು. ಮಂಡಲದ ಪ್ರಧಾನ ಕಾರ್ಯದರ್ಶಿ ಮೋಹನ್ ನಾಯ್ಕ ಅವರು ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಭಾಸ್ಕರ್ | ನೇ ದೈಮನೆ ಕಾರ್ಯಕ್ರಮ ನಿರೂಪಿಸಿದರು..

error: