
ಭಟ್ಕಳ ಅಂಜುಮಾನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತಿಮ ವರ್ಷದ ಬ್ಯಾಚುಲರ್ ಆಫ್ ಇಂಜಿನಿಯರಿoಗ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ.
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿoಗ್‌ನಲ್ಲಿ ಶೇ.೧೦೦, ಮೆಕ್ಯಾನಿಕಲ್ ಇಂಜಿನಿಯರಿoಗ್‌ನಲ್ಲಿ ಶೇ.೯೭.೩೬, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿAಗ್‌ನಲ್ಲಿ ಶೇ.೯೬.೬೭, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿoಗ್‌ನಲ್ಲಿ ಶೇ.೯೪.೧೧ ಮತ್ತು ಸಿವಿಲ್ ಇಂಜಿನಿಯರಿAಗ್‌ನಲ್ಲಿ ಶೇ.೯೦.೪೦ರಷ್ಟು ಫಲಿತಾಂಶ ಬಂದಿದೆ.
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿoಗ್‌ನ ಸಲ್ಮಾನ್ ಸಲೀಂ ಕುಟ್ಟಿ ಸಿವಿಲ್ ಎಂಜಿನಿಯರಿoಗ್‌ನ ಮಂಜುನಾಥ್ ಭಟ್, ಮೆಕ್ಯಾನಿಕಲ್ ಇಂಜಿನಿಯರಿAಗ್‌ನ ಸೈಯದ್ ಮುಫಿದ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿoಗ್‌ನ ಲೀಲಾಕ್ಷಿ ಗೊಂಡ , ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿoಗ್‌ನ ಪೂಜಾ ಶೇಟ್ ಮತ್ತು ಭೂಮಿಕಾ ಅರ್ಹತೆಯನ್ನು ಪಡೆದಿದ್ದಾರೆ. ಅಂತಿಮ ವರ್ಷದ ಅನೇಕ ವಿದ್ಯಾರ್ಥಿಗಳು ಈಗಾಗಲೇ ರಾಷ್ಟ್ರೀಯ ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕ್ಯಾಂಪಸ್ ಉದ್ಯೋಗದ ಮೂಲಕ ಉದ್ಯೋಗಗಳನ್ನು ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.
ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಂಜುಮಾನ್ ಅಧ್ಯಕ್ಷ ಮುಝಮ್ಮಿಲ್ ಖಾಜಿಯಾ, ಕಾರ್ಯದರ್ಶಿ ಸಿದ್ಧಿಕ್ ಇಸ್ಮಾಯಿಲ್, ಪ್ರಾಂಶುಪಾಲ ಡಾ. ಮುಷ್ತಾಕ್ ಅಹಮ್ಮದ್ ಭಾವಿಕಟ್ಟಿ ಬೋಧಕ ವೃಂದದವರು ಅಭಿನಂದಿಸಿದ್ದಾರೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ