March 12, 2025

Bhavana Tv

Its Your Channel

ಅಪಘಾತದಲ್ಲಿ ಮೃತಪಟ್ಟ ಪಿಎಲ್‌ಡಿ ಬ್ಯಾಂಕಿನ ನಿರ್ದೇಶಕ ಮಂಜುನಾಥ ನಾಯ್ಕರಿಗೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳಿOದ ಶ್ರದ್ಧಾಂಜಲಿ

ಭಟ್ಕಳ: ಇತ್ತೀಚೆಗೆ ಬೈಂದೂರು ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಟ್ಕಳ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಂಜುನಾಥ ಡಿ.ನಾಯ್ಕ ಜಾಲಿ ಅವರಿಗೆ ಪಿ.ಎಲ್.ಡಿ. ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳಿAದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮತ್ತು ಬ್ಯಾಂಕಿನ ಅಧ್ಯಕ್ಷ ಸುನೀಲ ನಾಯ್ಕ ಅವರು ಮಂಜುನಾಥ ನಾಯ್ಕ ಅವರು ಅಗಲಿರುವುದು ನಮಗೆಲ್ಲರಿಗೂ ನೋವು ತಂದಿದೆ. ಕ್ರಿಯಾಶೀಲ ವ್ಯಕ್ತಿತ್ವದ ಅವರು ಎರಡನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಅವರ ನಿಧನದಿಂದ ಕುಟುಂಬವರ್ಗ ದು:ಖದಲ್ಲಿದೆ. ಅವರ ಕುಟುಂಬದ ಜೊತೆ ನಾವೆಲ್ಲರೂ ಇದ್ದೇವೆ, ಅವರಿಗೆ ದು:ಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸೋಣ ಎಂದರು. ಪ್ರಧಾನ ವ್ಯವಸ್ಥಾಪಕ ವಿ. ಎಂ. ನಾಯ್ಕ ಮಾತನಾಡಿದರು. ಉಪಾಧ್ಯಕ್ಷೆ ಗಾಯತ್ರಿ ವಿಜಯಕುಮಾರ ನಾಯ್ಕ ಸೇರಿದಂತೆ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

error: