March 12, 2025

Bhavana Tv

Its Your Channel

ರಾಜ್ಯದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಭಟ್ಕಳ ಮಹಿಳಾ ಬ್ಲಾಕ್ ಕಾಂಗ್ರೆಸ್‌ನಿOದ ರಾಜ್ಯಪಾಲರಿಗೆ ಮನವಿ

ಭಟ್ಕಳ: ರಾಜ್ಯದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಭಟ್ಕಳ ಬ್ಲಾಕ್ ಮಹಿಳಾ ಬ್ಲಾಕ್ ಕಾಂಗ್ರೆಸ್‌ ಸಮಿತಿ ವತಿಯಿಂದ ಬುಧವಾರ(ಸೆ.೧) ಭಟ್ಕಳ ಉಪವಿಭಾಗಾಧಿಕಾರಿ ಮಮತಾ ದೇವಿ ಅವರ ಮೂಲಕ ರಾಜ್ಯಪಾಲ ಥಾವರ್ ಚಂದ ಗೇಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯಾದ್ಯಂತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಮಹಿಳೆಯರು, ಮಕ್ಕಳು ಧೈರ್ಯದಿಂದ ತಿರುಗಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ ಕಾರಣ ಜನರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ರಾಜ್ಯ ಗೃಹಮಂತ್ರಿಗಳು ಸೇರಿದಂತೆ ಸರ್ಕಾರದ ಅನೇಕ ಮಂತ್ರಿಗಳು ಮಹಿಳೆಯರ ಬಗ್ಗೆ ನಿರ್ಲಕ್ಷ್ಯದ ಭಾವನೆಯನ್ನು ಹೊಂದಿದ್ದು, ಮನಬಂದAತೆ ಉಡಾಫೆ ಹೇಳಿಕೆ ನೀಡುತ್ತಿದ್ದಾರೆ.

ಮೈಸೂರಿನಲ್ಲಿ ಅತ್ಯಾಚ್ಯಾರ ಎಸಗಿದ ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಹಾಗೂ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಆದೇಶಿಸುವಂತೆ ರಾಜ್ಯಪಾಲರಿಗೆ ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.
ಭಟ್ಕಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಜಯಲಕ್ಷ್ಮೀ ಗೊಂಡ, ಮಾಜಿ ಜಿ.ಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್, ತಾ.ಪಂ. ಉಪಾಧ್ಯಕ್ಷೆ ರಾಧಾ ವೈದ್ಯ, ಸಮೀಮ್ ಬಾನು ಇದ್ದರು.

error: