April 25, 2024

Bhavana Tv

Its Your Channel

ಐಟಾ ಆಯೋಜಿಸಿದ್ದ ಆನ್‌ಲೈನ್ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಸಚಿವ ಬಿ.ಸಿ.ನಾಗೇಶ್

ಭಟ್ಕಳ: ಶಿಕ್ಷಣ ಇಲಾಖೆ ಹಾಗೂ ಶಿಕ್ಷಕ ಸಮಸ್ಯೆಗಳನ್ನು ಹಂತಹAತವಾಗಿ ಬಗೆಹರಿಸುವ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಅವರು ಆಲ್ ಇಂಡಿಯಾ ಐಡಿಯಾಲ್ ಟೀರ‍್ಸ್ ಅಸೋಸಿಯೇಶನ್ ಕರ್ನಾಟಕ ಆಯೋಜಿಸಿದ್ದ ಆನ್‌ಲೈನ್ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಿಕ್ಷಣವು ಹಲವಾರು ನ್ಯೂನತೆ ಹಾಗೂ ಕೊರತೆಗಳಿಂದ ಕೂಡಿದ್ದು ಇದರ ಪರಿಣಾಮ ಸಮಾಜದ ಮೇಲಾಗುತ್ತಿದೆ. ಇದಕ್ಕಾಗಿಯೇ ಹೋಸ ಶಿಕ್ಷಣ ನೀತಿಯ ಮೂಲಕ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಿದ್ದು ಇದರಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು. ಕೋವಿಡ್ ಸಂದರ್ಭದಲ್ಲಿ ರಾಜ್ಯದ ಶಿಕ್ಷಕ ಸಮುದಾಯವು ನಿರ್ವಹಿಸಿದ ಕಾರ್ಯವನ್ನು ಶ್ಲಾಘಿಸಿದ ಸಚಿವರು ಇದಕ್ಕಾಗಿ ಇಡೀ ಶಿಕ್ಷಕರನ್ನು ಅಭಿನಂದಿಸುವುದಾಗಿ ತಿಳಿಸಿದರು. ಶಿಕ್ಷಕ ಸಮಸ್ಯೆಗಳನ್ನು ಗಮನಿಸಿದ್ದು ಹಂತ ಹಂತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಹೇಳಿದ ಅವರು ಮುಖ್ಯ ಮಂತ್ರಿಗಳು ರಾಜ್ಯದಲ್ಲಿ ೫೦೦೦ ಹೊಸ ಶಿಕ್ಷಕರ ನೇಮಕಕ್ಕೆ ಹಸಿರು ನಿಶಾನೆ ತೋರಿಸಿದ್ದು ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದೂ ಹೇಳಿದರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಶಿಕ್ಷಣ ಕ್ಷೇತ್ರ ಅತ್ಯಂತ ಪವಿತ್ರವಾಗಿದ್ದು ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಮೂಲಕ ಸರ್ಕಾರ ಜಾತಿ, ಧರ್ಮಾಧಾರಿತ ಪೂರ್ವಗ್ರಹಗಳನ್ನು ಜಾರಿಗೆ ತರಲು ಯತ್ನಿಸುತ್ತಿದ್ದು ಇದನ್ನು ಕೈಬಿಡಬೇಕೆಂದು ಹೇಳಿದರು.ದೇಶದಲ್ಲಿ ಏಕರೂಪದ ಶಿಕ್ಷಣ ಪದ್ದತಿಯನ್ನು ತರಬೇಕು ಎಂದೂ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮರ್ಕಝಿ ತಾಲೀಮಿ ಬೋರ್ಡ್ ದಹೆಲಿ ಇದರ ನಿರ್ದೇಶಕ ಹಾಗೂ ಶಿಕ್ಷಣ ತಜ್ಞ ಸೈಯ್ಯದ್ ತನ್ವೀರ್ ಅಹ್ಮದ್ ಹೊಸ ಶಿಕ್ಷಣ ನೀತಿಯ ಅನುಕೂಲ ಮತ್ತು ಅನಾನುಕೂಲತೆಗಳ ಕುರಿತಂತೆ ಸಮಗ್ರವಾಗಿ ಚರ್ಚೆಯಾಗಬೇಕು ಎಂದರು.
ಐಟಾ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. .ರಾಜ್ಯ ಕಾರ್ಯದರ್ಶಿ ಯಾಸೀನ್ ಭಿಕ್ಬಾ ಹಾಗೂ ರಾಜ್ಯ ಸಲಹಾ ಸಮಿತಿ ಸದಸ್ಯ ಡಾ. ಮುಬೀನ್ ಉಲ್ಲಾಳ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಮಹಿಳಾ ವಿಭಾಗದ ಸಂಚಾಲಕಿ ಬಿಲ್ಕೀಸ್ ಫಾತಿಮಾ ಧನ್ಯವಾದ ಅರ್ಪಿಸಿದರು.

error: