May 16, 2024

Bhavana Tv

Its Your Channel

ಪೋಷಣಾ ಮಾಸಾಚರಣೆ ಅಭಿಯಾನ

ಭಟ್ಕಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಭಟ್ಕಳ ಇದರ ಪೋಷಣಾ ಅಭಿಯಾನ ಯೋಜನೆಯಡಿ ಆಯೋಜಿಸಲಾದ ಸೆಪ್ಟೆಂಬರ್ ತಿಂಗಳ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ತಾಪಂ ಕಾರ್ಯ ನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ಉದ್ಘಾಟಿಸಿದರು.

ನ೦ತರ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ನಡೆಯುವ ತಾಯಂದಿರ ಸಭೆಯಲ್ಲಿ ಪೌಷ್ಠಿಕ ಆಹಾರಗಳ ಬಗ್ಗೆ ತಿಳುವಳಿಕೆ ಮೂಡಿಸುವ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಇದೆ. ಗರ್ಭೀಣಿ, ಬಾಣಂತಿ, ಕಿಶೋರಿಯರ ಆಹಾರಗಳ ಬಗ್ಗೆಯೂ ಕಾಳಜಿ ವಹಿಸಬೇಕಾಗಿದೆ. ಪ್ರತಿ ಗ್ರಾಮದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದ ಅಗತ್ಯ ಇದ್ದು, ಇದರ ಮಹತ್ವವನ್ನು ಜನರಿಗೆ ತಿಳಿ ಹೇಳಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಿಶು ಅಭಿವೃದ್ಧಿ
ಯೋಜನಾಧಿಕಾರಿ ವಿರೂಪಾಕ್ಷಗೌಡ ಪಾಟೀಲ ಮಾತನ-ಡಿ, ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರದ ಅರಿವಿನ ಜೊತೆಗೆ, ಅಪೌಷ್ಠಿಕ ಮಕ್ಕಳ ಕಾಳಜಿಯೂ ಅತ್ಯಗತ್ಯವಾಗಿದೆ ಎಂದು ವಿವರಿಸಿದರು. ಉಪ ವಿಜಾನೆಯ ಅಧಿಕಾರಿ ಕೃಷ್ಣ ಗೊಂಡ ಅತಿಥಿಯಾಗಿ ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇದರ ಮೇಲ್ವಿಚಾರಕಿ ಸುಶೀಲಾ ಮೊಗೇರ, ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದ್ಮಾ ಹೊಸನೆ ಕಾರ್ಯಕ್ರಮ ನಿರೂಪಿಸಿದರು. ಪವಿತ್ರಾ ನಾಯ್ಕ ವಂದಿಸಿದರು.

error: