April 20, 2024

Bhavana Tv

Its Your Channel

ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ

ಭಟ್ಕಳ ತಂಝೀoನಿoದ ಎಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮನವಿ

ಭಟ್ಕಳ:ದೆಹಲಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆಗೈದ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಮಜ್ಜಿಸ ಇಸ್ಲಾಹ ವ ತಂಝೀA ಎಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಪ್ರಕರಣದ ತನಿಖೆಯನ್ನು ಸ್ವತಂತ್ರ ಏಜೆನ್ಸಿಗೆ ವಹಿಸಬೇಕೆಂದು ಆಗ್ರಹಿಸಿ ಎಸಿ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಂಝೀA ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದಿ ದೆಹಲಿಯಲ್ಲಿ ಮಹಿಳಾ ಪೊಲೀಸ್ ಹತ್ಯಾ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಬೇರೆ ದೇಶದ ಹೆಣ್ಣುಮಕ್ಕಳ ಕುರಿತು ಕಾಳಜಿ ಹೊಂದಿರುವ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡುತ್ತಿದ್ದರೂ ಕಾಣುತ್ತಿಲ್ಲ. ಕೇಂದ್ರ ಸರ್ಕಾರದ ಬೇಟಿ ಬಚಾವೋ, ಬೇಟಿ ಪಡಾವೊ ಕೇವಲ ಘೋಷಣೆಯಷ್ಟೇ ಆಗಿದೆ. ಮಹಿಳಾ ಪೊಲೀಸ್ ಅಧಿಕಾರಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಕಿಡ್ನಾಪ್ ಮಾಡಿ ಅತ್ಯಾಚಾರಗೈದು ಕೊಲೆ ಮಾಡಿರುವುದು ತೀರಾ ಖಂಡನೀಯ. ಈ ಘಟನೆಯಿಂದ ಮಹಿಳೆಯರು ಸರ್ಕಾರಿ ಕರ್ತವ್ಯಕ್ಕೆ ಬರಲು ಹಿಂದೇಟು ಹಾಕುವಂತಾಗಿದೆ. ಸರ್ಕಾರ ಇನ್ನಾದರೂ ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಅತ್ಯಾಚಾರದ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಶೀಘ್ರ ಕಠಿಣ ಶಿಕ್ಷೆ ನೀಡುವಂತಾಗಬೇಕೆoದರು.
ತoಝೀ೦ಪ್ರಧಾನ ಕಾರ್ಯದರ್ಶಿ ಅಬ್ದುರ್ ರಚ ಎಂ.ಜೆ. ಮಾತನಾಡಿದರು. ಮನವಿ ಸ್ವೀಕರಿಸಿದ ಎಸಿ ಮಮತಾದೇವಿ ಮನವಿಯನ್ನು ಮೇಲಧಿಕಾರಿಗಳಿಗೆ ಕಳುಹಿಸುವುದಾಗಿ ತಿಳಿಸಿದರು. ಮನವಿಯನ್ನು ಇಮಾನ್ ಲಂಕಾ ಓದಿದರು. ತಂಝೀo ಅಧ್ಯಕ್ಷ ಎಸ್.ಎಂ. ಪರ್ವೇಜ್, ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಮಜಿ, ಮುಖಂಡರಾದ ಅಲ್ತಾಪ್ ಖರೂರಿ, ಮೊಹ್ಮದ್ ಸಾಧೀಕ್ ಮಟ್ಟಾ, ಮುಸ್ಲಿಂ ಯುತ್ ಫೆಡರೇಶನ್ ಅಧ್ಯಕ್ಷ ಅಜೀಜುರೆಹಮಾನ್, ರವೂಫ್ ನಾಯ್ಕ ಸೇರಿದಂತೆ ಹಲವರಿದ್ದರು.

error: