April 26, 2024

Bhavana Tv

Its Your Channel

ಸಾಂಕೇತಿಕವಾಗಿ ಮಣಿಪಾಲ ಕಾರ್ಡ್ ಬಿಡುಗಡೆಗೊಳಿಸಿದ ಕಸ್ತೂರ್ಬಾ ಆಸ್ಪತ್ರೆಯ ಮಣಿಪಾಲದ ಉಪವ್ಯವಸ್ಥಾಪಕ ಮೋಹನ ಶೆಟ್ಟಿ

ಭಟ್ಕಳ: ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಮಣಿಪಾಲ್ ಕಾರ್ಡ್ ಯಶಸ್ವಿ ೨೦ ವರ್ಷಗಳನ್ನು ಪೂರೈಸಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ಮಣಿಪಾಲದ ಉಪ ವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು.

ಅವರು ಗುರುವಾರ ಪಟ್ಟಣದ ಖಾಸಗಿ ಹೋಟೆಲನಲ್ಲಿ ಸಾಂಕೇತಿಕವಾಗಿ ಮಣಿಪಾಲ ಕಾರ್ಡ್ ಬಿಡುಗಡೆಗೊಳಿಸಿ ಮತನಾಡಿದರು. ಕಳೆದ ೨೦ ವರ್ಷಗಳಲ್ಲಿ ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕೃಷ್ಟ ಗುಣಮಟ್ಟದ ಚಿಕಿತ್ಸೆಯನ್ನು ರಿಯಾಯಿತಿ ದರದಲಿ ನೀಡುವುದರ ಮೂಲಕ ಈ ಯೋಜನೆಗೆ ಹೆಚ್ಚು ಹೆಚ್ಚು ಸದಸ್ಯರನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪಾಲ್ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ”.

ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರಕನ್ನಡ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ ಮತ್ತು ಮಧ್ಯ ಕರ್ನಾಟಕದ ಸುಮಾರು ೧೨ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆ ಅಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ” ಎಂದು ಅವರು ಹೇಳಿದರು.
ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು ೧ ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ (೩೦೦/-, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, ೨೫ ವರ್ಷದ ಒಳಗಿನ ಮಕ್ಕಳಿಗೆ ತಲಾ ೬೦೦/- ಮತ್ತು ಕುಟುಂಬ ವ್ಯಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, ೨೫ ವರ್ಷದ ಒಳಗಿನ ಮಕ್ಕಳು ಮತ್ತು ೪ ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ೧೭೫೦/- ಇದೊಂದು ಹೆಚ್ಚುವರಿ ಲಾಭವಾಗಿದೆ. ೨ ವರ್ಷದ ಯೋಜನೆಯಲ್ಲಿ ಒಬ್ಬರಿಗೆ ೭೫೦೦/-, ಕುಟುಂಬಕ್ಕೆ ೧೮೦೦/- ಮತ್ತು ಕೌಟಂಬಿಕ ಸ್ಮಸ್ ಯೋಜನೆಗೆ ೧೯೫೦/ಆಗಿರುತ್ತದೆ.

ಸಿಟಿ, ಎಂಆರ್‌ಐ, ಅಲ್ಮಾಸೌಂಡ್ ಗಳಲ್ಲಿ ಶೇಕಡಾ ೨೦ ರಿಯಾಯಿತಿ, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ ೨೦ ರಿಯಾಯಿತಿ, ಔಷಧಾಲಯಗಳಲ್ಲಿ ಶೇಕಡಾ ೧೨ರವರೆಗೆ ರಿಯಾಯಿತಿ, ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್ ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇಕಡಾ ೧೦ ರಿಯಾಯಿತಿ ನೀಡಲಾಗುತ್ತಿದೆ. ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಲ್ಲಿ ಇದನ್ನು ಬಳಸಬಹುದು. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಮಣಿಪಾಲ ಆರೋಗ್ಯ ಕಾರ್ಡಿನ ಪ್ರತಿನಿಧಿಯಾಗಬೇಕಾದಲ್ಲಿ ರಾಜೇಂದ್ರ ನಾಯ್ಕ ಅವರನ್ನು ೭೭೬೦೯೫೭೩೯೦ ಸಂಪರ್ಕಿಸಬಹುದಾಗಿದೆ.

೨೦೨೧ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ: ಸೈಂಟ್ ಮಿಲಾಗ್ರೆಸ್ ಸೌಹಾರ್ದದ ಎಲ್ಲಾ ಶಾಖೆಗಳು: ಭಟ್ಕಳ 9538894590,, ಮುರುಡೇಶ್ವರ 9538020303, ಶಿರಾಲಿ : 8277099156. ರಾಧಾಕೃಷ್ಣ ಭಟ್ : 9448221117 ಗೌರಿಶಂಕರ್ : 8722540496,ಯುವರಾಜ್: 9964888755,ಶಾರದಾ ಪಿ ಬಿ: 9343413629 ಮತ್ತು ಗಜಾನನ ಶೆಟ್ಟಿ: 9448530583

error: