March 14, 2025

Bhavana Tv

Its Your Channel

ಅ.೨೦ರಂದು ಭಟ್ಕಳ ತಾಲೂಕಿನ ಅಳ್ವೇಕೋಡಿ ದುರ್ಗಾಪರಮೇಶ್ವರ ಸಭಾ ಭವನದಲ್ಲಿ ಪ್ರತಿಭಾ ಪುರಸ್ಕಾರ

ಭಟ್ಕಳ: ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟ್ ಅಳ್ವೇಕೋಡಿ ಇದರ ವತಿಯಿಂದ ಪ್ರತಿ ವರ್ಷ ನಡೆಸಲಾಗುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಈ ವರ್ಷ ಶ್ರೀ ಗೋಕರ್ಣ ಪರ್ತಗಾಳಿ ಶ್ರೀ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶತೀರ್ಥ ಸ್ವಾಮೀಜಿವರ ಆಶೀರ್ವಾದದೊಂದಿಗೆ ಅ.೨೦ರಂದು ಆಳ್ವೇಕೋಡಿ ದುರ್ಗಾಪರಮೇಶ್ವರ ಸಭಾ ಭವನದಲ್ಲಿ ನಡೆಯಲಿದೆ ಎಂದು ಟ್ರಷ್ಟನ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಸುನಿಲ್ ನಾಯ್ಕ, ಮಾಜಿ ಶಾಸಕ ಮಂಕಾಳ ಎಸ್. ವೈದ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮಿತಿ ಅಧ್ಯಕ್ಷ ಹನುಮಂತ ಮಂಜಪ್ಪ ನಾಯ್ಕ, ಮಾರಿಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ರಾಮಾ ಎಂ. ಮೊಗೇರ, ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಎಂ. ಮೊಗೇರ, ಶಿರಾಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ರವಿಶಂಕರ ನಾಯ್ಕ ಉಪಸ್ಥಿತರಿರುವರು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

error: