
ಭಟ್ಕಳ: ಮೇ ಜೂನ್ನಲ್ಲಿ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಚುನಾವಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಮತದಾರರ ನೋಂದಣಿ ಪ್ರಕ್ರಿಯೆ ಜಾರಿಯಲ್ಲಿದ್ದು ಕರ್ನಾಟಕ ಮಾಧ್ಯಮಿಕ ಪ್ರೌಢಶಾಲಾ ಶಿಕ್ಷಕರ ಸಂಘದಿAದತಾಲೂಕಿನ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳ ಮುಖ್ಯಶಿಕ್ಷಕರೊಂದಿಗೆ ಶುಕ್ರವಾರ ಇಲ್ಲಿನ ಬಂದರ್ರಸ್ತೆಯ ನ್ಯೂಇಂಗ್ಲಿಷ್ ಪ್ರೌಢಶಾಲೆಯಲ್ಲಿ ಸಭೆ ನಡೆಯಿತು.
ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದಅಧ್ಯಕ್ಷ ಶಬ್ಬಿರ್ ಆಹ್ಮದ್ ದಫೆದಾರ್, ಮೇ ಜೂನ್ ತಿಂಗಳÀಲ್ಲಿ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಚುನಾವಣೆ ನಡೆಯುತ್ತಿದ್ದು ಇದಕ್ಕಾಗಿ ಮತದಾರರು ನೋಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ. ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಎಲ್ಲ ಶಿಕ್ಷಕರು ಅರ್ಜಿಗಳನ್ನು ಭರ್ತಿ ಮಾಡಿ ನವೆಂಬರ್ ೬ ರ ಒಳಗೆ ತಹಸಿಲ್ದಾರ ಕಚೇರಿಗೆ ಸಲ್ಲಿಸಬೇಕಾಗಿದ್ದು ಈ ಹಿನ್ನೆಲೆಯಲ್ಲಿ ಎಲ್ಲ ಪ್ರೌಢಶಾಲೆಗಳ ಮುಖ್ಯಾಧ್ಯಾಪಕರು ತಮ್ಮ ತಮ್ಮ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ನೋಂದಾಯಿಸಿ ಕೊಳ್ಳಬೇಕೆಂದು ಅವರು ಮನವಿ ಮಾಡಿಕೊಂಡರು.
ಪ್ರಸ್ತವಾವಿಕವಾಗಿ ಮಾತನಾಡಿದ ಸಂಘದ ಸಂಚಾಲಕ ಹಾಗೂ ನ್ಯೂಇಂಗ್ಲಿಷ್ ಶಾಲೆಯ ಮುಖ್ಯಾಧ್ಯಾಪಕ ಗಣಪತಿ ಶಿರೂರು ಅರ್ಜಿಗಳನ್ನು ತುಂಬುವ ಕುರಿತಂತೆ ಮಾಹಿತಿ ನೀಡಿದರು. ನಮೂನೆ ೧೯ರಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ಅನುಬಂಧ-೨ ರಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಂದ ಪಡೆದ ಪ್ರಮಾಣಪತ್ರ, ದೃಢಿಕೃತ ಮತದಾರರ ಗುರುತಿನಚೀಟಿ ಪ್ರತಿ, ದೃಢಿಕೃತ ಆಧಾರಕಾರ್ಡ್ ಪ್ರತಿ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯಲ್ಲಿ ಲಗತ್ತಿಸಬೇಕೆಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಭಟ್ಕಳ ತಾಲೂಕು ಮಾಧ್ಯಮಿಕ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಬ್ಬಿರ್ ಆಹ್ಮದ್ ದಫೇದಾರ್, ಭಟ್ಕಳ ತಾಲೂಕು ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರ್ ನಾಯ್ಕ, ಆಲ್ ಇಂಡಿಯಾ ಐಡಿಯಾಲ್ ಟೀಚರ್ಸ್ ಅಸೋಸಿಯೇಶನ್ ಕರ್ನಾಟಕ ಇದರ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ, ದುರ್ಗಾಪರಮೇಶ್ವರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಕೆ.ಬಿ.ಮಡಿವಾಳ, ಕರ್ನಾಟಕ ಶಿಕ್ಷಕರ ಬಳಗದ ಅಧ್ಯಕ್ಷ ಉಮೇಶ ನಾಯ್ಕ, ಐಟಾ ತಾಲೂಕಾಧ್ಯಕ್ಷ ಇಮ್ರಾನ್ ಮುಲ್ಲಾ ಮುಂತಾದವರು ಉಪಸ್ಥಿತರಿದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ