April 29, 2024

Bhavana Tv

Its Your Channel

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆಗಳ ಸಾಮೂಹಿಕ ಗಾಯನ ಕಾರ್ಯಕ್ರಮ

ಭಟ್ಕಳ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಭಟ್ಕಳ ಜಟ್ಟಪ್ಪ ನಾಯಕ (ಹಿರೇ ಬಸದಿ)ಯ ಮುಂಬಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡಕ್ಕಾಗಿ ನಾವು ವಿಶೇಷ ಕಾರ್ಯಕ್ರಮ ಕನ್ನಡ ಗೀತೆಗಳ ಸಾಮೂಹಿಕ ಗಾಯನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಪ ವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು, ಕನ್ನಡ ಮಾತನಾಡುವ ಸ್ಪರ್ಧೆ ಹಾಗೂ ಕನ್ನಡ ಅಭಿಯಾನ ಏರ್ಪಡಿಸುವ ಮೂಲಕ ಯಾವುದಾದರೊಂದು ಕನ್ನಡ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟಿದೆ. ಕನ್ನಡ ಗೀತ ಗಾಯನ ಸ್ಪರ್ಧೆಯಲ್ಲಿ ಡಾ. ಕುವೆಂಪು ಅವರ ಭಾರಿಸು ಕನ್ನಡ ಡಿಂಡಿಮವ, ನಾಡೋಜ ಕೆ.ಎಸ್. ನಿಸ್ಸಾರ್ ಅಹಮ್ಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖಾ ಅವರ ಹುಟ್ಟಿದರೇ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎನ್ನುವ ಗೀತಗಾಯನ ಕಾರ್ಯಕ್ರಮ ವಿಶ್ವದಾದ್ಯಂತ ಏಕಕಾಲದಲ್ಲಿ ಹಮ್ಮಿಕೊಂಡಿರುವುದು ಕನ್ನಡದ ಹೆಮ್ಮೆ ಎಂದರು.
ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಎನ್.ಎಸ್.ರಾಧಿಕಾ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಪುರಸಭಾ ಅಧಿಕಾರಿ ವೇಣುಗೋಪಾಲ ಶಾಸ್ತ್ರಿ, ಹಿರಿಯ ಆರೋಗ್ಯ ಅಧಿಕಾರಿ ಸುಜಯಾ ಸೋಮನ್, ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ರಾಜ್ಯ ಸಮಿತಿ ಸದಸ್ಯ ಪ್ರಕಾಶ ಶಿರಾಲಿ, ತಹಸೀಲ್ದಾರ್ ಗ್ರೇಡ್೨ ಸಂತೋಷ ಭಂಡಾರಿ, ಶಿಕ್ಷಣ ಸಮನ್ವಯಾಧಿಕಾರಿ ಯಲ್ಲಮ್ಮ, ನ್ಯೂ ಇಂಗ್ಲೀಷ್ ಶಾಲೆಯ ಮುಖ್ಯೋಪಾಧ್ಯಾಯ ಗಣಪತಿ ಶಿರೂರು, ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ರೇಖಾ ಖಾರ್ವಿ ಮುಂತಾದವರು ಉಪಸ್ಥಿತರಿದ್ದರು. ನ್ಯೂ ಇಂಗ್ಲೀಷ್ ಶಾಲೆಯ ಹಾಗೂ ವಿದ್ಯಾಭಾರತಿ ಶಾಲೆಯ ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.
ತಹಸೀಲ್ದಾರ್ ಎಸ್. ರವಿಚಂದ್ರ ಅವರು ವಂದಿಸಿದರು.

error: