
ಭಟ್ಕಳ: ವಿಶ್ವ ಪ್ರಸಿದ್ಧ ಮುರ್ಡೇಶ್ವರದ ಶಿವನ ಮೂರ್ತಿಯ ಚಿತ್ರವನ್ನು ವಿರೂಪಗೊಳಿಸಿ, ಸಾಮಾಜಿ ಜಾಲತಾಣದಲ್ಲಿ ಹರಿಬಿಟ್ಟು, ಪ್ರವಾಸಿಗರಲ್ಲಿ ಭಯದ ವಾತಾವರಣ ನಿರ್ಮಿಸಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಭಟ್ಕಳದ ಮಾಜಿ ಶಾಸಕ ಮಂಕಾಳು ವೈದ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಹಿಂದುಗಳ ಧಾರ್ಮಿಕ ಕ್ಷೇತ್ರ ಮತ್ತು ವಿಶ್ವದಲ್ಲೆ ಪ್ರಸಿದ್ಧಿ ಗಳಿಸಿರುವ ಪ್ರವಾಸಿ ತಾಣ ಮುರ್ಡೇಶ್ವರ ಕ್ಷೇತ್ರವಾಗಿದೆ. ಐಎಸ್‌ಐಎಸ್ ಸಂಘಟನೆಯ “ವೈಸ್ ಆಫ್ ಹಿಂದ್” ಎಂಬ ಪತ್ರಿಕೆಯೊಂದು ನನ್ನ ಕ್ಷೇತ್ರಕ್ಕೊಳಪಡುವ ಮುರ್ಡೇಶ್ವರ ದೇವಸ್ಥಾನದ ಶಿವನ ಮೂರ್ತಿಯನ್ನು ಕೆಡವುವಂತೆ ತನ್ನ ಮುಖಪಟದಲ್ಲಿ ಪ್ರಕಟ ಮಾಡಿ, ಸಾಮಾಜಿಕ ಜಾಲತಾಣಗಳ ಮೂಲಕ ವೈರಲ್ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ ಮಾಜಿ ಶಾಸಕ ಮಂಕಾಳ ವೈದ್ಯ ಅವರು, ನನ್ನ ಕ್ಷೇತ್ರದಲ್ಲಿ ಇಂತಹ ಯಾವುದೇ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರವಹಿಸಬೇಕು. ಇಂಥ ಸೂಕ್ಷö್ಮ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳದೇ, ಸರ್ಕಾರ ಮತ್ತು ಜಿಲ್ಲಾಡಳಿತ ಈ ಪ್ರಕರಣದ ಗಂಭೀರತೆಯನ್ನು ಅರಿತುಕೊಂಡು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು. ಈ ಪ್ರಕರಣದ ಹಿಂದಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ, ಕಾನೂನು ರೀತಿಯ ಕಠಿಣ ಶಿಕ್ಷೆ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ. ದೇಶದ ಪ್ರಸಿದ್ಧ ಪ್ರವಾಸಿ ತಾಣವಾದ ಮುರ್ಡೇಶ್ವರಕ್ಕೆ ಸೂಕ್ತ ಭದ್ರತೆ ಒದಗಿಸುವ ಮೂಲಕ ಸಂಭವನೀಯ ಅನಾಹುತವನ್ನು ತಪ್ಪಿಸಬೇಕು ಎಂದು ಮಾಜಿ ಶಾಸಕ ಮಂಕಾಳು ವೈದ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ