
ಭಟ್ಕಳ ಮಣ್ಕುಳಿಯ ರಾಷ್ಟ್ರೀಯ ಹೆದ್ದಾರಿ೬೬ ರಲ್ಲಿ ರಸ್ತೆ ದಾಟುತ್ತಿದ್ದ ವೃದ ಮಹಿಳೆಯೋರ್ವಳಿಗೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಸೊಮವಾರ ನಡೆದಿದೆ.
ಗಾಯಗೊಂಡ ವೃದ ಮಹಿಳೆಯು ಪದ್ಮಾವತಿ ಭಟ್ ಮಾರುಕೇರಿಯ ಮಠದಹಿತ್ಲು ನಿವಾಸಿ ಎಂದು ತಿಳಿದು ಬಂದಿದೆ. ಈಕೆ ಮಣ್ಕುಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿ ದಾಟುತ್ತಿರುವ ವೇಳೆ ಕುಂದಾಪುರದಿAದ ಶಿರಾಲಿ ಅಳ್ವೆಕೋಡಿ ಸಮುದ್ರ ತೀರಕ್ಕೆ ಶಿಲೆಕಲ್ಲು ಹಾಕಲು ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತವಾಗಿದೆ.
ಅಪಘಾತದ ಬಳಿಕ ವೃದ ಮಹಿಳೆಯನ್ನು ಭಟ್ಕಳ ಸರ್ಕಾರಿ ಆಸ್ಪತ್ರೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತ ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಪಘಾತಕ್ಕೆ ಕಾರಣ ಪೋಲಿಸ ತನಿಖೆಯಿಂದ ತಿಳಿದು ಬರಬೇಕಾಗಿದೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ