
ಭಟ್ಕಳ: ನಮ್ಮ ಗುರಿ ಶ್ರೇಷ್ಠವಾಗಿರಬೇಕು ಮತ್ತು ಗುರಿಯತ್ತ ಸಾಗುವ ದಾರಿ ನೇರ, ಪ್ರಾಮಾಣಿಕ ಮತ್ತು ಪರಿಶ್ರಮಯುತವಾಗಿರಬೇಕು ಎಂದು ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ಜೈಕಿಶನ್ ಭಟ್ ತಿಳಿಸಿದರು.
ಭಟ್ಕಳ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಇಂದು ಪದವಿ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ವಿದ್ಯಾರ್ಥಿ ಕಲ್ಯಾಣ ಸಂಘದಿAದ ಹಮ್ಮಿಕೊಂಡ ಒಂದು ದಿನದ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕೌಶಲ್ಯ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರೊ. ಜೈಕಿಶನ್ ಮೇಲಿನಂತೆ ಕರೆ ನೀಡಿದರು. ವಿದ್ಯಾರ್ಥಿಗಳಿಗೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಬೇಕಾದ ಪ್ರಾಮಾಣಿಕತೆ, ಸತತ ಪರಿಶ್ರಮ, ಸಮಯ ಪ್ರಜ್ಞೆ ಮತ್ತು ಸಮಯ ನಿರ್ವಹಣೆಗಳ ಅಗತ್ಯವನ್ನು ಮನಮುಟ್ಟುವಂತೆ ವಿವರಿಸಿದರು. ಶ್ರೀಯುತರು ಈ ಸಂದರ್ಭದಲ್ಲಿ ಅನೇಕ ದೃಷ್ಟಾಂತ ಮತ್ತು ಚಟುವಟಿಕೆಗಳ ಮೂಲಕ ಆಲಿಸುವ ಕೌಶಲ್ಯ, ಸಂವಹನ ಕೌಶಲ್ಯ, ಅಭಿವ್ಯಕ್ತಿ ಕೌಶಲ್ಯಗಳ ಪ್ರಾಮುಖ್ಯತೆಯನ್ನು ಪರಿಣಾಮಕಾರಿಯಾಗಿ ವಿವರಿಸಿದರು.
ಕಾರ್ಯಾಗಾರವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಮುಸ್ತಾಕ್ ಕೆ. ಶೇಖ್ ವಿದ್ಯಾರ್ಥಿಗಳಲ್ಲಿ ಅಂತರ್ಗತವಾಗಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಹೊರತರಲು ಇಂತಹ ಕಾರ್ಯಾಗಾರಗಳು ಅಗತ್ಯವಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ವೇದಿಕೆಯಲ್ಲಿ ಪ್ರೊ. ಎಸ್. ಎ. ಇಂಡಿಕರ್, ಪ್ರೊ. ಹಿಬ್ಬಾನ್ ಉಪಸ್ಥಿತರಿದ್ದರು.
ಆರಂಭದಲ್ಲಿ ಪ್ರೊ. ಮುನೀಬ್ ಪ್ರಾರ್ಥಿಸಿದರೆ, ವಿದ್ಯಾರ್ಥಿ ಶ್ರೇಯಸ್ ನಾಯಕ ಸರ್ವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಪ್ರೊ. ಅಬ್ದುಲ್ ಮುಹಿಮ್ಮಿನ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ಗಾನಿಮ್ ಮೊಹತಿಶಾಮ್ ವಂದಿಸಿದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ