March 12, 2025

Bhavana Tv

Its Your Channel

ಬೈಕ್ ಹಾಗೂ ಕಾರಿನ ನಡುವೆ ಅಪಘಾತ, ಬೈಕ್ ಸವಾರ ಗಂಭೀರ ಗಾಯ

ಭಟ್ಕಳ ತಾಲೂಕಿನ ಗೊರಟೆ ಕ್ರಾಸ್ ಸಮೀಪ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಯೋಗೇಶ ನಾಯ್ಕ ಎಂದು ತಿಳಿದು ಬಂದಿದ್ದು. ಈತ ಭಟ್ಕಳದಿಂದ ಗೊರಟೆಯಲ್ಲಿರುವ ತನ್ನ ಅಕ್ಕನ ಮನೆಗೆ ತೆರಳುತ್ತಿರುವ ವೇಳೆ ಕುಂದಾಪುರದಿoದ ಕಾರವಾರ ಕಡೆಗೆ ತೆರಳುತ್ತಿದ್ದ ಕಾರೊಂದು ಬೈಕಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕಾಲಿಗೆ ಗಂಭೀರವಾಗಿ ಗಾಯವಾಗಿದೆ .ನಂತರ ಪ್ರಥಮ ಚಿಕಿತ್ಸೆಗೆ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

error: