March 28, 2024

Bhavana Tv

Its Your Channel

ಡಿಸೆಂಬರ್ ೧೮ರಂದು ಬೃಹತ್ ರಾಷ್ಟ್ರೀಯ ಲೋಕ-ಅದಾಲತ್ ಕಾರ್ಯಕ್ರಮ

ಭಟ್ಕಳ: ಬೃಹತ್ ರಾಷ್ಟ್ರೀಯ ಲೋಕ-ಅದಾಲತ್ ಕಾರ್ಯಕ್ರಮ ಡಿಸೆಂಬರ್ ೧೮ರಂದು ನಡೆಯಲಿದ್ದು ಲೋಕ ಅದಾಲತ್ ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ನ್ಯಾಯಾಲಯಕ್ಕೆ ಬರುವ ಪೂರ್ವದ ಪ್ರಕರಣಗಳನ್ನು ಕೂಡಾ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದಯ ಅಧ್ಯಕ್ಷ ಜಗದೀಶ ಶಿವಪೂಜಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಕಾರ್ಯದರ್ಶಿ ಫವಾಜ್ ಪಿ.ಎ. ಅವರು ತಿಳಿಸಿದ್ದಾರೆ.

ಸುದ್ದಿಗಾರರಿಗೆ ವಿಷಯ ತಿಳಿಸಿದ ಅವರು ಸಾರ್ವಜನಿಕರು ತಮ್ಮ ತಮ್ಮ ಬಾಬ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇಚ್ಚಿಸಿದಲ್ಲಿ ಮುಂಚಿತವಾಗಿ ಸಂಬAಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳುವಂತೆ ಕೋರಿದ್ದಾರೆ.

ಭಟ್ಕಳದಲ್ಲಿ ಈ ಹಿಂದೆ ನಡೆದ ಎರಡು ಲೋಕ ಅದಾಲತ್ಗಳಲ್ಲಿ ಅಗಸ್ಟ್ ೧೪ರಂದು ನಡೆದ ಲೋಕ ಅದಾಲತ್ನಲ್ಲಿ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಒಟ್ಟೂ ವಿವಿಧ ನಮೂನೆಯ ೧೮೨ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಹೆಚ್ಚುವರಿ ನ್ಯಾಯಾಲಯದಲ್ಲಿ ೧೧೧ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ೯ನ್ನು ಇತ್ಯರ್ಥಪಡಿಸಲಾಗಿದೆ.

ಸೆಪ್ಟಂಬರ್ ೩೦ರಂದು ನಡೆದ ಲೋಕ ಅದಾಲತ್ ನಲ್ಲಿ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಒಟ್ಟೂ ವಿವಿಧ ನಮೂನೆಯ ೧೦೧ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ೬೨ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ೨೫ ಪ್ರಕರಣಗಳನ್ನು ತೆಗೆದುಕೊಂಡಿದ್ದು ಅವುಗಳಲ್ಲಿ ೭ ಪ್ರಕರಣಗಳು ಇತ್ಯರ್ಥವಾಗಿವೆ. ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಒಂದು ವ್ಯಾಜ್ಯ ಪೂರ್ವ ಪ್ರಕಣವನ್ನು ಇತ್ಯರ್ಥಪಡಿಸಲಾಗಿದೆ ಎಂದೂ ಮಾಹಿತಿ ನೀಡಿದರು.
ಡಿಸೆಂಬರ್ ೧೮ರಂದು ನಡೆಯಲಿರುವ ರಾಷ್ಟ್ರೀಯ ಲೋಕ-ಅದಾಲತ್ ಕಾರ್ಯಕ್ರಮದಲ್ಲಿ ಹೆಚ್ಚಿನ ಪ್ರಕರಣಗಳನ್ನು ಇತ್ಯಾರ್ಥ ಮಾಡಲು ಸಾರ್ವಜನಿಕರು ಮುಂದೆ ಬರಬೇಕು ಎಂದೂ ಅವರು ಕರೆ ನೀಡಿದ್ದಾರೆ.

error: