March 13, 2025

Bhavana Tv

Its Your Channel

ಅಂತಿಮ ವರ್ಷದ ವಾಣಿಜ್ಯ ವಿಭಾಗದ ಫಲಿತಾಂಶ ಪ್ರಕಟ; ಉತ್ತಮ ಸಾಧನೆ ಮಾಡಿದ ಭಟ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು

ಭಟ್ಕಳ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೦-೨೧ನೇ ಸಾಲಿನಲ್ಲಿ ನಡೆದ ಅಂತಿಮ ವರ್ಷದ ವಾಣಿಜ್ಯ ವಿಭಾಗದ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದು ಕಾಲೇಜಿಗೆ ಶೇ.೮೦ರಷ್ಟು ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಲ್ಲಿ ಸುಷ್ಮಾ ಎಮ್ ನಾಯ್ಕ ಶೇ.೯೩.೪೨ ಕಾಲೇಜಿಗೆ ಪ್ರಥಮ, ದೇವರಾಜ ಎನ್. ನಾಯ್ಕ ಶೇ.೮೯.೪೨ ದ್ವಿತೀಯ ಮತ್ತು ಮಹಾಲಕ್ಷಿö್ಮÃ ಸಿ. ನಾಯ್ಕ ಶೇ.೮೮.೭೧ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಉತ್ತಮ ಸಾಧನೆಯನ್ನು ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು, ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದಿಸಿದ್ದಾರೆ.

error: