
ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ತಾಲೂಕಿನ ಮಾವಿನಕುರ್ವೆ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ವಿಚಾರ ಗೋಷ್ಟಿಯನ್ನು ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಚೇತನ ಅವರು ದೀಪ ಬೆಳಗುವುದರೊಂದಿಗೆ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ವಿವಿಧ ಸಂಘಗಳ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಉತ್ತಮವಾಗಿ ಕೆಲಸ ಮಾಡುತ್ತಿದ್ದು ಮಹಿಳೆಯರಿಗೆ ವರದಾನವಾಗಿದೆ ಎಂದರು. ತಮ್ಮ ಇಲಾಖೆಯಿಂದ ಮೀನುಗಾರ ಮಹಿಳೆಯರಿಗೆ ದೊರೆಯುವ ಸೌಲಭ್ಯಗಳ ಕುರಿತು ವಿವರಿಸಿದರು.
ಕಾರ್ಯಕ್ರಮದ ಅಧ್ಯ÷ಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಭಾಗೀರಥಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು ಮಾತನಾಡಿದ ನ್ಯಾಯವಾದಿ ಸಂತೋಷ ಎಂ. ನಾಯ್ಕ ಅವರು ಮಾತನಾಡಿ ಮಹಿಳೆಯರಿಗೆ ಕಾನೂನಾತ್ಮಕವಾಗಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡಿದರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ವಲಯದ ಮೇಲ್ವಿಚಾರಕ ಕೇಶವ ಹಾಗೂ ಸಂತೋಷ ಉಪಸ್ಥಿತರಿದ್ದರು.
ಶೀಲಾ ಮತ್ತು ಮಾದೇವಿ ಪ್ರಾರ್ಥಿಸಿದರು. ದೀಪಾ ಸ್ವಾಗತಿಸಿದರು. ನಾಗವೇಣಿ ನಿರೂಪಿಸಿದರು. ರೇಖಾ ವಂದಿಸಿದರು. ನಂತರ ಮಹಿಳೆಯರಿಂದ ಭಕ್ತಿಗೀತೆ, ಜನಪದ ಗೀತೆ, ಕೋಲಾಟ, ಜನಪದ ನೃತ್ಯ ಸೇರಿದಂತೆ ಮನೋರಂಜನಾ ಕಾರ್ಯಕ್ರಮ ನಡೆಯಿತು.
.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ