
ಭಟ್ಕಳ: ಅವರು ಮಂಗಳವಾರ ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಒಂದೊಮ್ಮೆ ಕೊಲೆ ಪ್ರಕರಣ ಭೇದಿಸಿದರೆ ತಾವೇ ಸಿಕ್ಕಿಬೀಳುವ ಭಯದಿಂದ ತನಿಖೆ ಮುಂದೂಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು.
ಮನುಷ್ಯತ್ವ ಮೀರಿದವರು ಬಿಜೆಪಿಗರು. ಬಿಜೆಪಿಗರ ಪ್ರಣಾಳಿಕೆಯೇ ಅದನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ರಸ್ತೆ, ನೀರು, ಸೇತುವೆ ಬಗ್ಗೆ ಮಾತನಾಡಿದರೆ, ಬಿಜೆಪಿಗರು ಹಿಂದೂ ಮುಸ್ಲಿಂ, ಚೀನಾ, ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಇಂತಹ ಜನವಿರೋಧಿ, ಜನರ ಶಾಂತಿ ನೆಮ್ಮದಿ ಕೆಡಿಸುವ ಪಕ್ಷ ನಮಗೆ ಬೇಕೇ ಎಂದು ಪ್ರಶ್ನಿಸಿದರು.
ಈ ದೇಶದ ಸಂವಿಧಾನದ ಮೇಲೆ ನಂಬಿಕೆ ಇರದ ಬಿಜೆಪಿಗರು ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿಗರಿಗೆ ಪಂಚಾಯ್ತಿ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಸ್ಥಳೀಯ ಆಡಳಿತಗಳಿಗೆ ಅಧಿಕಾರ ನೀಡದೆ ಎಲ್ಲವನ್ನೂ ತಾವೇ ಕಬಳಿಸುತಿದ್ದಾರೆ ಎಂದರು.
ಮಾಜಿ ಶಾಸಕ ಮಂಕಾಳ ವೈದ್ಯ ಮಾತನಾಡಿ ತಾ.ಪಂ, ಜಿಲ್ಲಾ ಪಂಚಾಯ್ತಿಗಳಲ್ಲಿ ಅಧಿಕಾರ ಕಳೆದುಕೊಳ್ಳುವ ಭಯದಿಂದ ಸರ್ಕಾರ ಚುನಾವಣೆ ಮುಂದೂಡಿದೆ. ಸರ್ಕಾರದ ಈ ನೀತಿ ವಿರುದ್ದ ಚುನಾವಣಾ ಆಯೋಗ ನ್ಯಾಯಾಲಯದಲ್ಲಿ ದಾವೆ ಹೂಡಿದೆ. ಸ್ಥಳೀಯ ಆಡಳಿತಕ್ಕೆ ಅಧಿಕಾರ ನೀಡಲು ಮನಸ್ಸಿಲ್ಲದ ಅಧಿಕಾರಕ್ಕಾಗಿ ಬಿಜೆಪಿಗರು ಸುಳ್ಳು ಹೇಳುತ್ತಾ ಸಾಮಾನ್ಯ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ, ಕಾಂಗ್ರೆಸ್ ಮುಖಂಡ ಮುಜಾಮಿಲ್, ಉತ್ತರ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಜಿಲ್ಲಾ ಘಟಕ ಅಧ್ಯಕ್ಷ ಅಬ್ದುಲ್ ಮಜೀದ್, ಜಿ.ಪಂ.ಮಾಜಿ ಅಧ್ಯಕ್ಷೆ ಜಯಶ್ರೀ ಮೊಗೇರ, ನಯನಾ ನಾಯ್ಕ, ಟಿ.ಡಿ.ನಾಯ್ಕ ಇದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ