
ಭಟ್ಕಳ: ಅಂಬುಲೆನ್ಸ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತನಾದ ಘಟನೆ ಸರ್ಪನಕಟ್ಟೆಯ ಬಳಿಯಲ್ಲಿ ಸಂಭವಿಸಿದೆ.
ಮೃತನನ್ನು ಭಟ್ಕಳ ತಾಲೂಕಿನ ಕೋಣಾರ ಬೇಸೆಯ ನಿವಾಸಿ ರಮೇಶ ಜೋಗಿ ಗೊಂಡ ಎಂದು ಗುರುತಿಸಲಾಗಿದ್ದು ಬೈಕಿನಲ್ಲಿದ್ದ ಇನ್ನೋರ್ವ ನಾಗಪ್ಪ ನಾರಾಯಣ ನಾಯ್ಕ ಇವರು ಅಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ.
ಕಾರವಾರ ಕಡೆಯಿಂದ ಮಂಗಳೂರು ಕಡೆಗೆ ರೋಗಿಯೋರ್ವರನ್ನು ಕರೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್ ಹಾಗೂ ಬೆಣಂದೂರು ರಸ್ತೆಯಿಂದ ಸರ್ಪನಕಟ್ಟೆಯ ಕಡೆಗೆ ಬರುತ್ತಿದ್ದ ಬೈಕ್ ಸವಾರನ ನಡುವೆ ಅಪಘಾತ ಸಂಭವಿಸಿತ್ತು ಎನ್ನಲಾಗಿದೆ. ಅಂಬುಲೆನ್ಸ್ನಲ್ಲಿದ್ದ ರೋಗಿಯನ್ನು ನಂತರ ಬೇರೊಂದು ಅಂಬುಲೆನ್ಸ್ನಲ್ಲಿ ಕಳುಹಿಸಲಾಯಿತು ಎಂದು ತಿಳಿದು ಬಂದಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ