May 15, 2024

Bhavana Tv

Its Your Channel

ಡಿಸೆಂಬರ್ ೧೮ರಂದು ಶ್ರೀಧರ ಪದ್ಮಾವತಿ ದೇವಿಯ ರಥೋತ್ಸವ

ಭಟ್ಕಳ : ಇದೇ ಬರುವ ಡಿಸೆಂಬರ್ ೧೮ರ ಶನಿವಾರ ತಿಮ್ಮಯ್ಯ ದಾಸರಿಂದ ಸಂಸ್ಥಾಪಿಸಲ್ಪಟ್ಟ ಭಟ್ಕಳ ಶ್ರೀಧರ ಪದ್ಮಾವತಿ ದೇವಿಯ ರಥೋತ್ಸವ ನಡೆಯಲಿದೆ. ಈ ದಿನ ಮುಂಜಾನೆಯಿAದ ದೇವಿಯ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದ್ದು ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೪ಗಂಟೆಗೆ ಪುರಬೀದಿಯಲ್ಲಿ ಪದ್ಮಾವತಿ ದೇವಿಯ ರಥೋತ್ಸವದ ಮೆರವಣಿಗೆ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಬೇಕೆಂದು ದೇವಾಲಯದ ಧರ್ಮದರ್ಶಿಗಳು ಕೋರಿದ್ದಾರೆ.

error: