December 22, 2024

Bhavana Tv

Its Your Channel

ಡಿ.22 ಕ್ಕೆ ಅರಣ್ಯವಾಸಿಗಳಿಂದ ಬೆಳಗಾಂವ ಚಲೋ: ಅರಣ್ಯವಾಸಿಗಳ ಮೇಲೆ ದಾಖಲಿಸಿದ ಕ್ರಿಮಿನಲ್ ಪ್ರಕರಣ ಹಿಂದಕ್ಕೆ ಪಡೆಯಲು ಅಗ್ರಹ.

ಭಟ್ಕಳ: ಉತ್ತರ ಕನ್ನಡ ಜಿಲ್ಲಾದ್ಯಂತ ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯ ಅತಿಕ್ರಮಣದಾರರ ಮೇಲೆ ದಾಖಲಿಸಿದ ಕ್ರಿಮಿನಲ್ ಪ್ರಕರಣವನ್ನು ಹಿಂದಕ್ಕೆ ಪಡೆಯುವಂತೆ ಅರಣ್ಯವಾಸಿಗಳ ಸಮಸ್ಯೆಗಳನ್ನು ಸಲ್ಲಿಸುವ ದಿಶೆಯಲ್ಲಿ ಬೆಳಗಾಂವ ಚಲೋ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಅಗ್ರಹಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯವಾಸಿಗಳ ಸಮಸ್ಯೆಗಳನ್ನು ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಡಿ. 22 ರಂದು ಅರಣ್ಯವಾಸಿಗಳಿಂದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಬೆಳಗಾಂವ ಚಲೋ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ನೀಡುವ ಮನವಿಯಲ್ಲಿ ಜಿಲ್ಲಾದ್ಯಂತ ಅರಣ್ಯ ಅತಿಕ್ರಮಣದಾರರ ಮೇಲೆ ದಾಖಲಾಗಿರುವ ಕ್ರೀಮಿನಲ್ ಪ್ರಕರಣವನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಲಾಗುವದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.
ಅನಕ್ಷರಸ್ಥ ಅರಣ್ಯವಾಸಿಗಳ ಮೇಲೆ, ಅರಣ್ಯ ಭೂಮಿ ಸಾಗುವಳಿಯ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ, ಕಾನೂನಿನ ವಿಧಿ-ವಿಧಾನ ಅನುಸರಿಸದೇ ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಹಾಗೂ ಪೋಲೀಸ್ ರಕ್ಷಣೆಯೊಂದಿಗೆ ಜರುಗಿದ ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ವಿನಾಕಾರಣ ಕ್ರೀಮಿನಲ್ ಪ್ರಕರಣವನ್ನು ದಾಖಲಿಸಿ ಅರಣ್ಯ ಅತಿಕ್ರಮಣದಾರರ ಮೇಲೆ ದೌರ್ಜನ್ಯವೆಸಗಿರುವುದನ್ನು ಅವರು ಪ್ರಕಟಣೆಯಲ್ಲಿ ಖಂಡಿಸಿದ್ದಾರೆ.
ಮoಜೂರಿಕ್ಕಿoತ ಒಕ್ಕಲೆಬ್ಬಿಸುವಲ್ಲಿ ಆಸಕ್ತಿ ಹೆಚ್ಚು:
ಜಿಲ್ಲೆಯ ಅರಣ್ಯ ಅಧಿಕಾರಿಗಳಿಗೆ ಅರಣ್ಯವಾಸಿ ವಿರೋಧ ಮನೋಭಾವನೆಯನ್ನು ಹೊಂದಿದ್ದು, ಅರಣ್ಯವಾಸಿಗಳಿಗೆ ಭೂಮಿ ಹಕ್ಕು ನೀಡುವ ಇಚ್ಛಾಶಕ್ತಿಕ್ಕಿಂತ, ಅರಣ್ಯಾಧಿಕಾರಿಗಳಿಗೆ ಹೆಚ್ಚಾಗಿ ಒಕ್ಕಲೆಬ್ಬಿಸುವಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವುದು ದುರದೃಷ್ಟಕರ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

error: